ನಾಳೆ(ಜೂ.22): ನರಿಮೊಗರು ಸರಸ್ವತಿ ವಿದ್ಯಾಮಂದಿರದ ಶಿಶು ಮಂದಿರ, ವಸತಿ ನಿಲಯದ ನೂತನ ಕಟ್ಟಡ ಉದ್ಘಾಟನೆ

0

ಪುತ್ತೂರು: ನರಿಮೊಗರು ಸರಸ್ವತಿ ವಿದ್ಯಾ ಮಂದಿರದ ಶಿಶು ಮಂದಿರ ಮತ್ತು ವಸತಿ ನಿಲಯದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಜೂ.22ರಂದು ಬೆಳಿಗ್ಗೆ ನಡೆಯಲಿದೆ. ಶ್ರೀಮದೆಡನೀರು ಮಠದ ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಪಾದಂಗಳವರು ನೂತನ ವಿಭಾಗದ ಉದ್ಘಾಟನೆ ನೆರವೇರಿಸಲಿದ್ದಾರೆ. ತರಗತಿ ಕೊಠಡಿ ಮತ್ತು ವಸತಿ ನಿಲಯದ ಉದ್ಘಾಟನೆಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಯವರು ಮಾಡಲಿದ್ದಾರೆ. ಶಿಶು ಮಂದಿರದ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕರಾದ ವೆಂಕಟರಮಣ ಭಟ್ ಮಾಡತ್ತಾರು ನೆರವೇರಿಸಲಿದ್ದಾರೆ. ಪೋಷಕರು, ಶಿಕ್ಷಣ ಪ್ರೇಮಿಗಳು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುಂತೆ ಕೊಡಕಿರಿ ಫೌಂಡೇಶನ್‌ನ ಅಧ್ಯಕ್ಷ ಅವಿನಾಶ್ ಕೊಡಂಕಿರಿ ಮತ್ತು ಟ್ರಸ್ಟಿಗಳು, ಆಡಳಿತಾಧಿಕಾರಿ ಶುಭಾ ಅವಿನಾಶ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಶಿವನಾಥ ರೈ ಮೇಗಿನಗುತ್ತು ಪೋಷಕರು, ಮುಖ್ಯಗುರು ದಿವ್ಯಾ ಮತ್ತು ಶಿಕ್ಷಕ, ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿ ನಾಯಕ ಮತ್ತು ಎಲ್ಲಾ ವಿದ್ಯಾರ್ಥಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here