ಪುತ್ತೂರು: ಚೈತನ್ಯ ಮಿತ್ರ ವೃಂದ ಪಡೀಲ್ ಪುತ್ತೂರು ಇದರ ವತಿಯಿಂದ ವಿಶ್ವ ಯೋಗ ದಿನಾಚರಣೆಯನ್ನು ಸಂಸ್ಥೆಯ ಕಛೇರಿಯಲ್ಲಿ ನಡೆಸಲಾಯಿತು. ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಪುರಂದರ್ ಪಡೀಲ್‌ರವರು ದೀಪ ಬೆಳಗಿಸಿ ಉದ್ಘಾಟಿಸಿ ಯೋಗದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಸಂಸ್ಥೆಯ ಅಧ್ಯಕ್ಷ ಆನಂದ್‌ರವರು ಸಭಾಧ್ಯಕ್ಷತೆ ವಹಿಸಿದ್ದರು. ಮಾಜಿ ಸಂಚಾಲಕ ಗಣೇಶ್ ಎನ್. ಸ್ವಾಗತಿಸಿ, ಮಾಜಿ ಅಧ್ಯಕ್ಷ ಚಂದ್ರಶೇಖರ್ ಕೇಪುಳು ವಂದಿಸಿದರು. ಪುರಂದರ್ ಪಡೀಲ್ ನೇತೃತ್ವದಲ್ಲಿ ಎಲ್ಲಾ ಸದಸ್ಯರು ಯೋಗಾಭ್ಯಾಸ ನಡೆಸಿದರು.