ನಿಡ್ಪಳ್ಳಿ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪಾಣಾಜೆ ಸುಬೋಧ ಪ್ರೌಢಶಾಲೆಯಲ್ಲಿ ಜೂ.21ರಂದು ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಶಿಕ್ಷಕ ಶ್ರೀಪತಿ ಭಟ್ ಯೋಗದ ಮಹತ್ವ ಹಾಗೂ ಅದರಿಂದ ಆಗುವ ಪ್ರಯೋಜನವನ್ನು ಮಕ್ಕಳಿಗೆ ತಿಳಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಸುಧೀರ್ ಎಸ್. ಪಿ ಅವರ ನೇತೃತ್ವದಲ್ಲಿ ಮಕ್ಕಳು ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿದರು. ಸಹ ಶಿಕ್ಷಕರು ಸಹಕರಿಸಿದರು.