ಬಡಗನ್ನೂರುಃ ಸರ್ವೋದಯ ವಿದ್ಯಾವರ್ಧಕ ಸಂಘ ಇದರ ವತಿಯಿಂದ ಮುನ್ನಡೆಸುತ್ತಿರುವ ಸರ್ವೋದಯ ಪ್ರೌಢಶಾಲಾ ಹಾಗೂ ಶ್ರೀ ಬಾಲಸುಬ್ರಹ್ಮಣ್ಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನಾಚರಣೆ ನಡೆಯಿತು. ಸುಮಾರು 250 ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಯೋಗಸಂಪನ್ಮೂಲ ವ್ಯಕ್ತಿ ಹಾಗೂ ಹಿರಿಯ ವಿದ್ಯಾರ್ಥಿಯಾದ ಜಯರಾಮ ಗೌಡ ಹಾಗೂ ರಾಮಕೃಷ್ಣ ಭಟ್ಟ್ ಪೈರುಪುಣಿ, ಇವರುಗಳು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು, ಬಳಿಕ ಮಕ್ಕಳಿಗೆ ಯೋಗದ ಬಗ್ಗೆ ಮಾರ್ಗದರ್ಶನ ನೀಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಸಂಸ್ಥೆಯ ಸಂಚಾಲಕರಾದ ಮಹಾದೇವ ಭಟ್ ಕೊಯಿಲ ಇವರು ಉಪಸ್ಥಿತರಿದ್ದರು. ಸಂಸ್ಥೆಯ ಮುಖ್ಯ ಗುರು ಸುಕೇಶ್ ರೈ ಎನ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿ ವಿದ್ಯಾರ್ಥಿಗಳಿಗೆ ಯೋಗದ ಮಹತ್ವವನ್ನು ತಿಳಿಸಿದರು. ಶಿಕ್ಷಕಿ ಪ್ರಿಯಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವುದರ ಮೂಲಕ ಯೋಗ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಶಿಕ್ಷಕಿ ಚಂದ್ರಲೇಖ ಕಾರ್ಯಕ್ರಮವನ್ನು ನಿರೂಪಿಸಿದರು. ಪ್ರೈಮರಿ ಶಾಲಾ ಮುಖ್ಯ ಗುರುಗಳಾದ ಶ್ರೀರಾಮಚಂದ್ರ ರಾವ್ ವಂದಿಸಿದರು. ಎಲ್ಲಾ ಶಿಕ್ಷಕ ವೃಂದದವರು ಸಹಕರಿಸಿದರು.