ಈಶ್ವರಮಂಗಲ:ಈಶ್ವರಮಂಗಲ ಶ್ರೀಪಂಚಲಿಂಗೇಶ್ವರ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು. 10ನೇ ತರಗತಿ ವಿದ್ಯಾರ್ಥಿ ವಿನೀತ್ ಕೆ ವಿ ಯೋಗ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ತದನಂತರ ವಿವಿಧ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ದೈಹಿಕ ಶಿಕ್ಷಕ ಮುರಳಿ ಮೋಹನ ಶೆಟ್ಟಿ ಇವರ ನೇತೃತ್ವದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾರ್ಥಿಗಳು ಶಿಕ್ಷಕ ಶಿಕ್ಷಕೇತರ ವೃಂದದವರು ಪಾಲ್ಗೊಂಡರು.