ಪುತ್ತೂರು: ವಿಶ್ವ ಯೋಗ ದಿನಾಚರಣೆ ಅಂಗವಾಗಿ ಯೋಗ ಕಾರ್ಯಕ್ರಮ ಸರ್ವೆ ಕಲ್ಪಣೆ ಸರಕಾರಿ ಪ್ರೌಢ ಶಾಲೆಯಲ್ಲಿ ಕಾರ್ಯಾಧ್ಯಕ್ಷ ಸಿದ್ದೀಕ್ ಸುಲ್ತಾನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮುಖ್ಯ ಶಿಕ್ಷಕಿ ಉಮೈರಾ ತಬಸ್ಸಮ್ ಸ್ವಾಗತಿಸಿ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಶಿಕ್ಷಕ ಸಹದೇವ್ ಕಾರ್ಯಕ್ರಮದ ಮಾಹಿತಿ ಹಾಗೂ ಯೋಗಾಸನ ನಡೆಸಿಕೊಟ್ಟರು.
ಸಭೆಯಲ್ಲಿ ಶಿಕ್ಷಕರಾದ ಕಾಂಚನಾ, ಕಮಲ, ವೆಂಕಟೇಶ್, ಉಮಾಶಂಕರ್, ಹರ್ಷಿತಾ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕಿ ಹರ್ಷಿತಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ವೆಂಕಟೇಶ್ ವಂದಿಸಿದರು.