ಪುತ್ತೂರು: ಷಣ್ಮುಖ ದೇವ ಪ್ರೌಢಶಾಲೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಕೊಳ್ತಿಗೆ ಇವರ ಸಹಯೋಗದಲ್ಲಿ ವಿಶ್ವ ಯೋಗದಿನವನ್ನು ಜೂ. 21ರಂದು ಪೆರ್ಲಂಪಾಡಿ ಷಣ್ಮುಖ ದೇವ ಪ್ರೌಢಶಾಲೆಯಲ್ಲಿ ಯೋಗ ದಿನ ಆಚರಿಸಲಾಯಿತು.
ಅತಿಥಿಗಳು ಭಾರತ ಮಾತೆಗೆ ಪುಷ್ಪ ಸಮರ್ಪಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಶಾಲಾ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು ,ಗುರುವೃಂದದವರು ಸಿಬ್ಬಂದಿ ವರ್ಗದವರು ಜೊತೆ ಸೇರಿ ಸಾಮೂಹಿಕ ಯೋಗ ಪ್ರದರ್ಶನ ನಡೆಯಿತು.ಯೋಗ ಶಿಕ್ಷಕ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ರೂಪುಗೊಂಡಿತು.