ಕಾಂಚನ ಶ್ರೀ ಲಕ್ಷ್ಮೀನಾರಾಯಣ ಹಿ.ಪ್ರಾ.ಶಾಲೆಯಲ್ಲಿ ಯೋಗ ದಿನಾಚರಣೆ

0

ನೆಲ್ಯಾಡಿ: ಕಾಂಚನ ಶ್ರೀ ಲಕ್ಷ್ಮೀ ನಾರಾಯಣ ಅನುದಾನಿತ ಹಿ.ಪ್ರಾ.ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.
ಶಾಲಾ ಮುಖ್ಯಗುರು ಎ.ಲಕ್ಷ್ಮಣ ಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿ, ಯೋಗವು ಮನಸ್ಸು ಮತ್ತು ಆತ್ಮವನ್ನು ಒಂದುಗೂಡಿಸಲು ಸಹಕಾರಿಯಾಗಿದೆ ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಪತಂಜಲಿ ಯೋಗ ಶಿಕ್ಷಣದ ಸದಸ್ಯರಾದ ಪ್ರದೀಪ್ ಹಾಗೂ ಯಶೋಧರ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಸಹಶಿಕ್ಷಕಿ ಸುಮಾ ಅವರು ಯೋಗದ ಇತಿಹಾಸ, ಉದ್ದೇಶ ಹಾಗೂ ಯೋಗ ಅಭ್ಯಾಸದಿಂದ ಮಾನಸಿಕ ಒತ್ತಡ, ಬೊಜ್ಜು, ಮಧುಮೇಹ, ಹೃದಯ ಸಂಬಂಧಿ ಕಾಯಿಲೆಗಳನ್ನು ಹೋಗಲಾಡಿಸಬಹುದು ಎಂದು ಹೇಳಿದರು. ಸಭಾ ಕಾರ್ಯಕ್ರಮದ ನಂತರ ಯೋಗ ಸಂಪನ್ಮೂಲ ವ್ಯಕ್ತಿಗಳಾದ ಪ್ರದೀಪ್ ಹಾಗೂ ಯಶೋಧರ್ ಅವರು ವಿದ್ಯಾರ್ಥಿಗಳಿಗೆ ಯೋಗ ಕಾರ್ಯಕ್ರಮ ನಡೆಸಿಕೊಟ್ಟರು. ಸಹಶಿಕ್ಷಕಿ ಮಹಾಲಕ್ಷ್ಮೀ ಕಾರ್ಯಕ್ರಮ ನಡೆಸಿಕೊಟ್ಟರು. ಅನಂತರ ವಿದ್ಯಾರ್ಥಿಗಳಿಂದ ಯೋಗವನ್ನು ಮಾಡಿಸಲಾಯಿತು. ಎಲ್ಲಾ ಶಿಕ್ಷಕರು ಸಹಕಾರ ನೀಡಿದರು.

LEAVE A REPLY

Please enter your comment!
Please enter your name here