ನೆಲ್ಯಾಡಿ: ಉದನೆ ಸೈಂಟ್ ಆಂಟನೀಸ್ ಪ್ರೌಢಶಾಲೆ ಹಾಗೂ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್ನಲ್ಲಿ ಜಂಟಿಯಾಗಿ ಅಂತರಾಷ್ಟ್ರೀಯ ಯೋಗದಿನವನ್ನು ಆಚರಿಸಲಾಯಿತು.
ಸಂಸ್ಥೆಯ ಸಂಚಾಲಕರಾದ ರೆ.ಫಾ ಹನಿ ಜೇಕಬ್ರವರು ಯೋಗದಿನಾಚರಣೆಯ ಶುಭಾಶಯ ಕೋರಿ ಯೋಗಾಭ್ಯಾಸಕ್ಕೆ ಚಾಲನೆ ನೀಡಿದರು. ಪ್ರೌಢಶಾಲಾ ಮುಖ್ಯಗುರು ಶ್ರೀಧರ ಗೌಡ ಅವರು ಯೋಗ ದಿನದ ಸಂದೇಶ ಸಾರಿ, ಯೋಗಾಭ್ಯಾಸವನ್ನು ನಡೆಸಿಕೊಟ್ಟರು. ಎರಡೂ ವಿಭಾಗದ ಶಿಕ್ಷಕ ವೃಂದ, ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
