ನೇರಳಕಟ್ಟೆ ಹಿ.ಪ್ರಾ. ಶಾಲೆಯಲ್ಲಿ ನೋಟ್ ಪುಸ್ತಕ ವಿತರಣೆ

0

ವಿಟ್ಲ: ನೇರಳಕಟ್ಟೆ ಹಿ.ಪ್ರಾ. ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು. ಶಾಲಾ ಶತಮಾನೋತ್ಸವ ಸಮಿತಿ ಗೌರವಧ್ಯಕ್ಷರಾದ ಲಕ್ಷ್ಮಿ ಎ ಹೆಗ್ಡೆರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು, ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಅಬೂಬಕ್ಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ವೇದಿಕೆಯಲ್ಲಿ ಶಾಲಾ ಶತಮಾನೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ನಿರಂಜನ್ ರೈ, ಉಪಾಧ್ಯಕ್ಷರಾದ ಭಾರತಿ, ಸ್ಥಳೀಯ ಗ್ರಾಮಪಂಚಾಯತ್ ಸದಸ್ಯರಾದ ಪ್ರೇಮಾಜಯಕರ್, ಲಕ್ಷ್ಮಿ ಮೊದಲಾದವರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಕುಸುಮ ರವರು ಸ್ವಾಗತಿಸಿದರು, ಶಿಕ್ಷಕಿ ಗೀತಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು‌. ಶಿಕ್ಷಕಿ ದೀಪಿಕಾ ವಂದಿಸಿದರು.

LEAVE A REPLY

Please enter your comment!
Please enter your name here