ಪುಣಚ: ಪ್ರಾಥಮಿಕ ಆರೋಗ್ಯ ಕೇಂದ್ರ ಪುಣಚ, ಮಹಿಳಾ ಕಲ್ಯಾಣ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಅಡ್ಯನಡ್ಕ ವಲಯದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಪುಣಚ-ಕೇಪು ಸ್ತ್ರೀ ಶಕ್ತಿ ಸಂಘದ ಸದಸ್ಯರೊಂದಿಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಪುಣಚ ಅಜ್ಜಿನಡ್ಕ ಪ್ರಾಥಮಿಕ ಅರೋಗ್ಯ ಕೇಂದ್ರದ ಸಭಾಂಗಣದಲ್ಲಿ ಜೂ.21 ರಂದು ಆಚರಿಸಲಾಯಿತು.
ವೈದ್ಯಾಧಿಕಾರಿ ಡಾ.ರಂಶೀಲಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಯೋಗದ ಬಗ್ಗೆ ಆಯುಷ್ ಇಲಾಖೆಯ ಸೂಚನೆಗಳನ್ನು ತಿಳಿಸಿ ಶುಭ ಹಾರೈಸಿದರು. ಹಿರಿಯ ಮೇಲ್ವಿಚಾರಕಿ ಹಾಗೂ ಯೋಗಶಿಕ್ಷಕಿ ಶಾರದಾ ಕೆ.ಯೋಗ ತರಬೇತಿ ನೀಡಿದರು. ಗ್ರಾ.ಪಂ. ಸದಸ್ಯೆ ಲಲಿತಾ ಅಜ್ಜಿನಡ್ಕ, ಸ್ತ್ರೀ ಶಕ್ತಿ ಸಂಘದ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.