ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

0

ವಿಟ್ಲ: ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನದ ವಿದ್ಯಾರ್ಥಿಗಳಾದ ಸಂಜನಾ ರಜಪೂತ ಹಾಗೂ ಪಿ ಕೆ ವಿಕಾಸ್ ಯೋಗ ಮಾರ್ಗದರ್ಶಕರಾಗಿ ಆಗಮಿಸಿ, ಹಲವಾರು ಯೋಗದ ಆಸನಗಳನ್ನು ಪ್ರದರ್ಶಿಸಿ ಅದರ ಮಹತ್ವವನ್ನು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷರಾದ ಪ್ರಹ್ಲಾದ್ ಶೆಟ್ಟಿ ಜೆ,ಶಾಲಾ ಪ್ರಾಂಶುಪಾಲರಾದ ರವೀಂದ್ರ ದರ್ಬೆ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸಂಸ್ಥೆಯ ಸಹ ಶಿಕ್ಷಕಿಯರಾದ ಶೋಭಾ ಎಂ ಶೆಟ್ಟಿ ಹಾಗೂ ಜಯಶೀಲ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here