ಪುತ್ತೂರು;ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯ ಬೀದರ್, ಭಾ.ಕೃ.ಅ.ಪ-ಕೃಷಿ ವಿಜ್ಞಾನ ಕೇಂದ್ರ, ದ.ಕ ಮಂಗಳೂರು, ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಬೆಂಗಳೂರು, ಡೇ.ಎನ್.ಆರ್.ಎಲ್.ಎಂ ಯೋಜನೆ ತಾ. ಪಂ ಪುತ್ತೂರು ಇವರ ಸಹಯೋಗದೊಂದಿಗೆ ಪರಿಶಿಷ್ಟ ಪಂಗಡದ ರೈತರಿಗೆ ಟಿ.ಎಸ್.ಪಿ ಯೋಜನೆಯಡಿ ತೋಟಗಾರಿಕಾ ತಾಂತ್ರಿಕತೆಗಳ ಕುರಿತು ತರಬೇತಿ ಕಾರ್ಯಕ್ರಮವು ಜೂ.21ರಂದು ತಾ. ಪಂ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾ.ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಮಾತನಾಡಿ, ಇಲಾಖೆಯಿಂದ ಸಿಗುವ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಬೇಕು. ಕೃಷಿ ಸಖಿಗಳು ಇಲಾಖೆಯಿಂದ ಸಿಗುವ ಯೋಜನೆಗಳನ್ನು ರೈತರಿಗೆ ತಲುಪಿಸಬೇಕು. ಸ್ವಾವಲಂಬಿ ಜೀವನ ನಡೆಸಬೇಕು ಎಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿ ಭಾರತೀಯ ತೋಟಗಾರಿಕಾ ಸಂಶೋದನಾ ಸಂಸ್ಥೆ ಬೆಂಗಳೂರು ಇದರ ಪ್ರಧಾನ ವಿಜ್ಞಾನಿ ಡಾ.ವಿ.ಶಂಕರ್, ಮಂಗಳೂರು ಕೃಷಿ ವಿಜ್ಞಾನ ಕ್ರೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ.ಟಿ.ಜಿ ರಮೇಶ, ಮಂಗಳೂರು ತೋಟಗಾರಿಕೆ, ಕೃಷಿ ವಿಜ್ಞಾನ ಕ್ರೇಂದ್ರದ ವಿಜ್ಞಾನಿ ಡಾ.ರಶ್ಮಿ.ಆರ್ ಇವರು ಇಲಾಖಾ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಉದ್ಯೋಗ ಖಾತರಿ ಯೋಜನೆಯ ಸಹಾಯಕ ನಿರ್ದೇಶಕಿ ಶೈಲಜಾ ಭಟ್, ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಮಂಜುಳಾ ಇಲಾಖೆಯ ಯೋಜನೆ, ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ಮಂಗಳೂರು ಕೃಷಿ ವಿಜ್ಞಾನ ಕ್ರೇಂದ್ರದಿಂದ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ 45 ಪರಿಶಿಷ್ಟ ಪಂಗಡದ ರೈತರಿಗೆ 200 ಹಣ್ಣಿನ ಗಿಡಗಳನ್ನು ವಿತರಣೆ ಮಾಡಲಾಯಿತು. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಜಗತ್.ಕೆ, ತಾಲೂಕು ಅಭಿಯಾನ ನಿರ್ವಹಣಾ ಘಟಕದ ಸಿಬ್ಬಂದಿಗಳು, ಕೃಷಿ ಸಖಿಗಳು, ರೈತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.