ಜೂ.23: ಅಳಕೆಮಜಲು ಅಶೋಕನಗರ ಶ್ರೀ ಶಾರದಾಂಬ ಭಜನಾ ಮಂಡಳಿಯಲ್ಲಿ ಸಾಧಕರಿಗೆ ಸನ್ಮಾನ, ಪುಸ್ತಕ ವಿತರಣೆ

0

ವಿಟ್ಲ: ಅಳಕೆಮಜಲು ಅಶೋಕನಗರ ಶ್ರೀ ಶಾರದಾಂಬ ಭಜನಾ ಮಂಡಳಿಯ ಆಶ್ರಯದಲ್ಲಿ ಎಸ್.ಎಲ್.ವಿ.ಬುಕ್ಸ್ ಇಂಡಿಯಾ ಪ್ರೈ.ಲಿ.ಮೈಸೂರು ಇದರ ಸಹಯೋಗದೊಂದಿಗೆ ಸಾಧಕರಿಗೆ ಸನ್ಮಾನ ಮತ್ತು ಉಚಿತ ಪುಸ್ತಕ ವಿತರಣಾ ಕಾರ್‍ಯಕ್ರಮವು ಜೂ.೨೩ ರಂದು ಅಳಕೆಮಜಲು ಅಶೋಕನಗರ ಶ್ರೀ ಶಾರದಾಂಭ ಭಜನಾ ಮಂಡಳಿಯ ವಠಾರದಲ್ಲಿ ನಡೆಯಲಿದೆ.

ಅಳಕೆಮಜಲು ಶ್ರೀ ಶಾರದಾಂಭ ಭಜನಾ ಮಂಡಳಿಯ ಅಧ್ಯಕ್ಷರಾದ ಜಗದೀಶ ಪೂಜಾರಿ ಅಳಕೆಮಜಲುರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅಥಿತಿಗಳಾಗಿ ಮೈಸೂರಿನ ಎಸ್.ಎಲ್.ವಿ. ಬುಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ಆಡಳಿತ ನಿರ್ದೇಶಕರಾದ ದಿವಾಕರದಾಸ್ ನೇರ್ಲಾಜೆ, ಪುತ್ತೂರಿನ ಮಹಾವೀರ ಆಸ್ಪತ್ರೆಯ ವೈದ್ಯರಾದ ಡಾ.ಸುರೇಶ್ ಪುತ್ತೂರಾಯ, ಉಜಿರೆ ಬೆಳಾಲು ಎಸ್.ಡಿ.ಎಂ ಹೈಸ್ಕೂಲ್ ನ ಮುಖ್ಯೋಪಾದ್ಯಾಯರಾದ ರಾಮಕೃಷ್ಣ ಭಟ್,
ಪ್ರಮುಖರಾದ ಪಿ. ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಸೋಮಶೇಖರ ಶೆಟ್ಟಿ ಅಳಕೆಮಜಲು ಮೊದಲಾದವರು ಉಪಸ್ಥಿತರಿರಲಿದ್ದಾರೆ ಎಂದು ಮಂದಿರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here