ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಸಂಸ್ಕಾರ ಶಿಕ್ಷಣದ ಉಪನ್ಯಾಸ

0

ಕಾಣಿಯೂರು: ವಿದ್ಯಾರ್ಥಿಗಳು ನಿತ್ಯ ನಾಮ ಜಪದ ವೈಶಿಷ್ಟ್ಯ, ಸಂಸ್ಕಾರಯುತರಾಗಿ ಬಾಳುವ ಬಗ್ಗೆ ಹಾಗೂ ಅವುಗಳನ್ನು ಉಳಿಸಿ ಬೆಳೆಸಿಕೊಳ್ಳಬೇಕು ಎಂದು ಪೌರೋಹಿತ್ಯರಾದ ಸತ್ಯನಾರಾಯಣ ಕಾರಂತ್ ರಾಮಕುಂಜ ಹೇಳಿದರು.


ಅವರು ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆ ಜೂ 22ರಂದು ನಡೆದ ಸಂಸ್ಕಾರ ಶಿಕ್ಷಣದ ಬಗ್ಗೆ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿಯವರು ಉದ್ಘಾಟಿಸಿ ಶುಭ ಹಾರೈಸಿದರು.
ಶಾಲಾ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ ಅವರು ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ವಿದ್ಯಾರ್ಥಿನಿಯರಾದ ಶ್ರಾವ್ಯ ರೈ , ವಿಜ್ಞಾತ್ರಿ ಬಿ ಪ್ರಾರ್ಥಿಸಿದರು. ಕನ್ನಡ ಮಾಧ್ಯಮದ ಮುಖ್ಯಗುರುಗಳಾದ ವಿನಯ ವಿ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು. ಆಂಗ್ಲ ಮಾಧ್ಯಮದ ಮುಖ್ಯ ಗುರು ನಾರಾಯಣ ಭಟ್ ವಂದಿಸಿದರು. ಆಂಗ್ಲ ಮಾಧ್ಯಮದ ಸಹಮುಖ್ಯಸ್ಥೆ ಅನಿತಾ ಜೆ ರೈ ಹಾಗೂ ಸಹ ಆಡಳಿತಾಧಿಕಾರಿ ಹೇಮನಾಗೇಶ್ ರೈ, ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here