ಬೊಳುವಾರು ನವನೀತಂ ಸಭಾಂಗಣದಲ್ಲಿ ಯೋಗ ದಿನಾಚರಣೆ

0

ಪುತ್ತೂರು : ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21.ರಂದು ಬೊಳುವಾರಿನ ‘ನವನೀತಂ’ ಸಭಾಂಗಣದಲ್ಲಿ ಆಚರಣೆ ಮಾಡಲಾಯಿತು. ಲಯನ್ಸ್ ಕ್ಲಬ್ ಪುತ್ತೂರು ತಾಲೂಕು, ತಾಲೂಕು ಮಹಿಳಾ ಒಕ್ಕೂಟ ಪುತ್ತೂರು, ನವ್ಯಶ್ರೀ ಮಹಿಳಾ ಮಂಡಲ, ವನಿತಾ ಸಮಾಜ, ಮತ್ತು ಶಿವಳ್ಳಿ ಸಂಪದ ಮಹಿಳಾ ವಿಭಾಗ ಪುತ್ತೂರು ಇವರ ಜಂಟೀ ಆಶ್ರಯದಲ್ಲಿ ಯೋಗ ಕಾರ್ಯಕ್ರಮ ನೆರವೇರಿತು.


ಕಾರ್ಯಕ್ರಮ ಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಸುಧಾ ಹೆಬ್ಬಾರ್ , ಯೋಗಗುರು ಆರ್ಟ್ ಆಫ್ ಲಿವಿಂಗ್ ಇವರು ಆಗಮಿಸಿ ಯೋಗದ ಬಗ್ಗೆ ಮಾಹಿತಿ ನೀಡುವ ಜೊತೆಗೆ ಮಹಿಳೆಯರಿಗೆ ಯೋಗದ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು. ತಾಲೂಕು ಮಹಿಳಾ ಒಕ್ಕೂಟ ಪುತ್ತೂರು ಇದರ ಅಧ್ಯಕ್ಷೆ ಶಾಂತಿ ಹೆಗಡೆ ಸ್ವಾಗತಿಸಿ, ವೇದಿಕೆಯಲ್ಲಿ ವನಿತಾ ಸಮಾಜದ ಗೌರವಾಧ್ಯಕ್ಷೆ ವತ್ಸಲಾರಾಜ್ಞಿ, ಒಕ್ಕೂಟದ ಕಾರ್ಯದರ್ಶಿ ಪೂರ್ಣಿಮಾ ಶೆಟ್ಟಿ ಉಪಸ್ಥಿತರಿದ್ದರು. ನವ್ಯಶ್ರೀ ಮಹಿಳಾ ಮಂಡಲದ ಅಧ್ಯಕ್ಷೆ ಪ್ರೇಮಲತಾ ರಾವ್ ವಂದಿಸಿದರು.

LEAVE A REPLY

Please enter your comment!
Please enter your name here