ಮರ್ದಾಳ: ಗುಡ್ ಶೆಫರ್ಡ್ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

0

ಕಡಬ: ಮರ್ದಾಳ ಗುಡ್ ಶೆಫರ್ಡ್ ಶಾಲೆಯಲ್ಲಿ 10ನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶಾಲಾ ಸಂಚಾಲಕರಾದ ತೋಮಸ್ ಪಿ ವಿ ಯವರು ಉದ್ಘಾಟಿಸಿದರು.

ಮುಖ್ಯ ಶಿಕ್ಷಕಿ ಪ್ರಿಯಕುಮಾರಿಯವರು ವಿದ್ಯಾರ್ಥಿಗಳಿಗೆ ಈ ವರ್ಷದ ಯೋಗ ದಿನಾಚರಣೆಯ ಥೀಮ್‌ನ ಮಹತ್ವ, ಮಾನವ ಕುಲಕ್ಕೆ ಅದರ ಪ್ರಾಮುಖ್ಯತೆ ಬಗ್ಗೆ ತಿಳಿಸಿದರು. ವಿದ್ಯಾರ್ಥಿಗಳಿಂದ ಯೋಗ ಪ್ರಾತ್ಯಕ್ಷಿಕೆಯು ದೈಹಿಕ ಶಿಕ್ಷಣ ಶಿಕ್ಷಕಿ ಹರಿಣಾಕ್ಷಿಯವರ ನೇತೃತ್ವದಲ್ಲಿ ನಡೆಯಿತು.

ಶಾಲಾ ಶೈಕ್ಷಣಿಕ ಸಲಹೆಗಾರರಾದ ಮೇಫಿ, ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಶಿಕ್ಷಕಿ ಶಿಲ್ಪಾ ಸ್ವಾಗತಿಸಿ, ಶಿಕ್ಷಕಿ ಹರಿಣಾಕ್ಷಿ ವಂದಿಸಿದರು. ಶಿಕ್ಷಕಿ ರಶೀದಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here