ಪಾಪೆಮಜಲು ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

0

ಪುತ್ತೂರು: ಪಾಪೆಮಜಲು ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ ಮತ್ತು ಸಂಗೀತ ದಿನಾಚರಣೆ ಯನ್ನು ಆಚರಿಸಲಾಯಿತು.
ಪೂರ್ವಾಹ್ನ ಒಂದು ಗಂಟೆಗಳ ಕಾಲ ವಿವಿಧ ಆಸನಗಳನ್ನು ಸಾಮೂಹಿಕವಾಗಿ ಅಭ್ಯಾಸ ಮಾಡಲಾಯಿತು. ನಂತರ ಸಭಾಕಾರ್ಯಕ್ರಮದಲ್ಲಿ ಯೋಗದ ಮಹತ್ವವನ್ನು ವಿವರಿಸಲಾಯಿತು.
ಸಂಗೀತ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.


ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ದಿ ಸಮಿತಿ ಕಾರ್ಯಧ್ಯಕ್ಷ ಇಕ್ಬಾಲ್ ಹುಸೇನ್ ವಹಿಸಿದ್ದರು. ಕಾರ್ಯಕ್ರಮ ದಲ್ಲಿ ಶಾಲಾಭಿವೃದ್ದಿ ಸಮಿತಿ ಸದಸ್ಯಚಂದ್ರಶೇಖರ ಬಲ್ಯಾ, ಶಾಲಾ ಮುಖ್ಯ ಶಿಕ್ಷಕ ಮೋನಪ್ಪ ಪೂಜಾರಿ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here