ಪುತ್ತೂರು: ಬೆಳಂದೂರು ಈಡನ್ ಗ್ಲೋಬಲ್ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಿಲಾಯಿತು. ಪ್ರಾಂಶುಪಾಲ ರಂಝೀ ಮುಹಮ್ಮದ್ ಯೋಗದ ಪ್ರಾಮುಖ್ಯತೆ ಮತ್ತು ಯೋಗದಿಂದ ನಮ್ಮ ದೇಹಕ್ಕಿರುವ ಲಾಭವನ್ನು ಮಕ್ಕಳಿಗೆ ತಿಳಿಸಿದರು. ನಂತರ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿಗಳು ಯೋಗ ಪ್ರದರ್ಶನ ಮಾಡುವ ಮೂಲಕ ಯೋಗ ದಿನ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಎಲ್ಲಾ ಬೋಧಕ ಮತ್ತು ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.