ರೋಟರಿ ಪುತ್ತೂರು ಸ್ವರ್ಣ ಪದ ಪ್ರದಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ, ವಿಶ್ವ ಯೋಗ ದಿನಾಚರಣೆ, ವಿಶ್ವ ಸಂಗೀತ ದಿನಾಚರಣೆ

0

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸ್ವರ್ಣ ಇದರ 10ನೇ ವರ್ಷದ ಪದ ಪ್ರದಾನ ಕಾರ್ಯಕ್ರಮವು ಜುಲೈ ತಿಂಗಳಲ್ಲಿ ಸುದಾನ ಎಡ್ವರ್ಡ್ ಹಾಲ್ ನಲ್ಲಿ ನಡೆಯಲಿದದ್ದು ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ರೋಟರಿ ಮನಿಷಾ ಸಭಾಂಗಣದಲ್ಲಿ ಬಿಡುಗಡೆಗೊಳಿಸಲಾಯಿತು.


ಈ ಸಂದರ್ಭದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಅಂತರರಾಷ್ಟ್ರೀಯ ಯೋಗ ತೀರ್ಪುಗಾರರು ಹಾಗೂ ರೋಟರಿ ಕ್ಲಬ್ ಪುತ್ತೂರು ಸ್ವರ್ಣ ಇದರ ಸದಸ್ಯರಾದ ಡಾ.ರಾಮಣ್ಣ ರೈ ಇವರ ನೇತೃತ್ವದಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಕ್ಲಬ್ಬಿನ ಹಲವಾರು ಸದಸ್ಯರು ಭಾಗವಹಿಸಿದ್ದರು. ಅಲ್ಲದೆ ವಿಶ್ವ ಸಂಗೀತ ದಿನಾಚರಣೆಯ ಪ್ರಯುಕ್ತ ರೋಟರಿ ಸ್ವರ್ಣ ಇದರ ಸದಸ್ಯ ಅಂತರಾಷ್ಟ್ರೀಯ ಹಾಡುಗಾರ ಅಶೋಕ ಆಚಾರ್ಯ ಇವರನ್ನು ಸನ್ಮಾನಿಸಲಾಯಿತು.

ನಂತರ ಜಂಟಿ ಕ್ಲಬ್ ಅಸೆಂಬ್ಲಿಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಸಹಾಯಕ ಗವರ್ನರ್ ಪುರಂದರ ರೈ ಮಿತ್ರಂಪಾಡಿ ಇವರು ಸಲಹೆ ಸೂಚನೆಗಳನ್ನು ನೀಡಿದರು. ನಿಯೋಜಿತ ಸಹಾಯಕ ಗವರ್ನರ್ ಸೂರ್ಯನಾಥ ಆಳ್ವ ಇವರು ಮುಂದಿನ ವರ್ಷದ ರೋಟರಿ ಸಂಸ್ಥೆಯ ಕಾರ್ಯಸೂಚಿಗಳ ಬಗ್ಗೆ ಮಾಹಿತಿಯನ್ನು ನೀಡಿದರು. ನಿಯೋಜಿತ ಅಧ್ಯಕ್ಷರಾದ ಸುರೇಶ್ ಪಿ ಇವರು ಮುಂದಿನ ವರ್ಷದ ರೋಟರಿ ಕ್ಲಬ್ ಪುತ್ತೂರು ಸ್ವರ್ಣದ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಸಭೆಯಲ್ಲಿ ವಲಯ ಸೇನಾನಿ ಭಾಸ್ಕರ್ ಕೋಡಿಂಬಾಳ, ನಿಯೋಜಿತ ವಲಯ ಸೇನಾನಿ ವೆಂಕಟರಮಣ ಗೌಡ ಕಳುವಾಜೆ ಹಾಗೂ ರೋಟರಿ ಕ್ಲಬ್ ಪುತ್ತೂರು ಸ್ವರ್ಣ ಇದರ ಹಲವಾರು ಪದಾಧಿಕಾರಿಗಳು ಮತ್ತು ಸದಸ್ಯರು ಹಾಜರಿದ್ದರು.

LEAVE A REPLY

Please enter your comment!
Please enter your name here