ಕಾಣಿಯೂರು: ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಅವರು ಜೂ.24ರಂದು ಕಡಬ ತಾಲೂಕಿನ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದರು. ಬಿ.ಎಸ್.ವೈ ಅವರನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಸ್ವಾಗತಿಸಿದರು. ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ತುಲಭಾರ ಸೇರಿದಂತೆ ವಿಶೇಷ ಪೂಜೆ ನೆರವೇರಿಸಿದರು. ಅಪರಾಹ್ನ ಸುಳ್ಯದಲ್ಲಿ ನಡೆಯಲಿರುವ ಭಾರತೀಯ ಜನತಾ ಪಾರ್ಟಿಯ ಸುಳ್ಯಮಂಡಲದ ನೂತನ ಕಾರ್ಯಾಲಯವನ್ನು ಉದ್ಘಾಟಿಸಲಿದ್ದಾರೆ.
