
ಉಪ್ಪಿನಂಗಡಿ : ಇಲ್ಲಿನ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿರುವ ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ(ನಿ) ಇದರ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ ದಿವಾಕರ ಶೆಟ್ಟಿ (76) ಅಲ್ಪ ಕಾಲದ ಅನಾರೋಗ್ಯದಿಂದಾಗಿ ಮಂಗಳೂರಿನಲ್ಲಿಂದು ನಿಧನರಾದರು.
ಸಹಕಾರಿ ಸಂಘದಲ್ಲಿ ಮೂರು ದಶಕಗಳ ಕಾಲ ಸೇವೆ ಸಲ್ಲಿಸಿ, ಸಂಘದ ಅಭಿವೃದ್ಧಿಯಲ್ಲಿ ಪ್ರಧಾನ ಪಾತ್ರವಹಿಸಿದ್ದ ಇವರು, ನಿವೃತ್ತಿಯ ನಂತರ ಇಳಂತಿಲ ಗ್ರಾಮದ ಬನ್ನೆಂಗಳದಲ್ಲಿ ಕೃಷಿ ಚಟುವಟಿಕೆಗಳಲ್ಲಿ ನಿರತರಾಗಿದ್ದರು. ಉಪ್ಪಿನಂಗಡಿ ಕಾಳಿಕಾಂಬಾ ಭಜನಾ ಮಂಡಳಿಯ ಲೆಕ್ಕ ಪರಿಶೋಧಕರಾಗಿಯೂ, ವಿವಿಧ ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಜನಾನುರಾಗಿಯಾಗಿದ್ದ ಇವರು, ಪತ್ನಿ, ಒರ್ವ ಪುತ್ರ, ಒರ್ವ ಪುತ್ರಿಯನ್ನು ಅಗಲಿದ್ದಾರೆ.