ರಾಜ್ಯದ ಕಾಂಗ್ರೆಸ್ ಸರಕಾರ ಜನಹಿತ ಮರೆತಿದೆ -ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

0

ಸುಬ್ರಹ್ಮಣ್ಯ: ರಾಜ್ಯದ ಕಾಂಗ್ರೆಸ್ ಸರಕಾರ ಜನಹಿತ ಮರೆತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.

ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪತ್ರಕರ್ತರ ಜೊತೆ ಮಾತನಾಡಿ, ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ರಾಜ್ಯ ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿದೆ. ನೀರಾವರಿ ಯೋಜನೆಗಳು ಸ್ಥಗಿತಗೊಂಡಿದೆ ಎಂದು ಆರೊಪಿಸಿದರು.

ಬಿಜೆಪಿ ಮುಂದೆ ಅಂಕಿ ಅಂಶಗಳನ್ನು ಇಟ್ಟುಕೊಂಡು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಅಭಿವೃದ್ಧಿ ಒತ್ತಾಯಿಸಿ ಹೋರಾಟ ನಡೆಸಲಿದೆ ಎಂದರು.

ಮುಂದಿನ ಎಲ್ಲಾ ಚುನಾವಣೆಯಲ್ಲೂ ಬಿಜೆಪಿ ಹಾಗೂ ಜೆಡಿಎಸ್ ಹೊಂದಾಣಿಕೆಯಿಂದ ಮುಂದುವರಿಯಲಿದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here