ರಾಜ್ಯಾದ್ಯಂತ ಚಿಕನ್ ಕಬಾಬ್‌, ಮೀನಿನ ಖಾದ್ಯಕ್ಕೆ ಕೃತಕ ಬಣ್ಣ ಬಳಕೆಯನ್ನು ನಿರ್ಬಂಧಿಸಿ ರಾಜ್ಯ ಸರಕಾರ ಮಹತ್ವದ ಆದೇಶ 

0

ಬೆಂಗಳೂರು: ರಾಜ್ಯಾದ್ಯಂತ ಚಿಕನ್ ಕಬಾಬ್‌, ಮೀನಿನ ಖಾದ್ಯಕ್ಕೆ ಕೃತಕ ಬಣ್ಣ ಬಳಕೆಯನ್ನು ನಿರ್ಬಂಧಿಸಿ ರಾಜ್ಯ ಸರಕಾರ ಮಹತ್ವದ ಆದೇಶ ಹೊರಡಿಸಿದೆ.ಈ ಸಂಬಂಧ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ 39 ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗೊಳಪಡಿಸಿತ್ತು. ವಿಶ್ಲೇಷಣೆಗೊಳಪಡಿಸಲಾದ ಮಾದರಿಗಳಲ್ಲಿ 8 ಕಬಾಬ್‌ನ ಮಾದರಿಗಳು ಕೃತಕ ಬಣ್ಣದಿಂದ ( ಸನ್‌ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್ ಹೊಂದಿರುವ ಮಾದರಿಗಳು) ಕೂಡಿರುವುದರಿಂದ ಅಸುರಕ್ಷಿತ ಎಂದು ವಿಶ್ಲೇಷಣಾ ವರದಿಗಳಲ್ಲಿ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಈ ತೀರ್ಮಾನ ಕೈಗೊಂಡಿದೆ.

ವೆಜ್/ಚಿಕನ್/ಫಿಶ್ ಇತರೆ ಕಬಾಬ್‌ಗಳ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದನ್ನು ನಿರ್ಬಂಧಿಸಿ ಸರಕಾರ ಆದೇಶಿಸಿದೆ. ಉಲ್ಲಂಘನೆಯ ಪ್ರಕರಣಗಳು ಕಂಡು ಬಂದಲ್ಲಿ ತಯಾರಿಸುವವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ಅವಧಿಯವರೆಗೆ ಜೈಲು ಶಿಕ್ಷೆಯನ್ನು ಮತ್ತು ರೂ.10.00 ಲಕ್ಷಗಳವರೆಗೆ ದಂಡವನ್ನು ವಿಧಿಸಬಹುದಾಗಿದೆ ಎಂದು ಸರಕಾರದ ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here