ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಸಂಘದ ಉದ್ಘಾಟನೆ

0

ಚೌಕಟ್ಟಿಗೆ ಸೀಮಿತವಾಗದೆ, ಅವಕಾಶಗಳ ಬೆನ್ನತ್ತಿ ಗುರಿ ತಲುಪಿ : ವಿದ್ಯಾ ಎಸ್‌.

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಕಲಾ ಸಂಘದ ವಿವಿಧ ಚಟುವಟಿಕೆಗಳ ಮುನ್ನುಡಿಯಾಗಿ ಸಂಘದ ಉದ್ಘಾಟನೆ ನೆರವೇರಿಸಲಾಯಿತು. ಮುಖ್ಯ ಅತಿಥಿಗಳಾಗಿ ವಿವೇಕಾನಂದ ಮಹಾವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ವಿದ್ಯಾ ಎಸ್. ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು “ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಪಠ್ಯಕ್ಕೆ ಕೊಡುವಷ್ಟೇ ಮಹತ್ವವನ್ನು ಪಠ್ಯೇತರ ಚಟುವಟಿಕೆಗಳಿಗೂ ನೀಡಬೇಕಾಗುತ್ತದೆ. ಆದುದರಿಂದ ಶಾಲಾ – ಕಾಲೇಜುಗಳು ವ್ಯಕ್ತಿತ್ವ ನಿರ್ಮಾಣಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಕಲಾ ವಿಭಾಗವು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುವುದರ ಜತೆಗೆ ಬದುಕುವ ಕಲೆಯನ್ನು ಕರಗತಗೊಳಿಸುತ್ತದೆ.” ವಿದ್ಯಾರ್ಥಿಗಳು ಪಠ್ಯದ ಜತೆಗೆ ತಮ್ಮ ಆಸಕ್ತ ವಿಷಯಗಳನ್ನು ಅಧ್ಯಯನ ಮಾಡುವುದರ ಮೂಲಕ ಒಂದು ಚೌಕಟ್ಟಿಗೆ ಸೀಮಿತವಾಗದೆ ಅವಕಾಶಗಳ ಬೆನ್ನತ್ತಿ ಜೀವನದಲ್ಲಿ ಸಫಲರಾಗುವಂತೆ ಕಿವಿಮಾತನ್ನು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮಹೇಶ್‌ ನಿಟಿಲಾಪುರ ವಹಿಸಿಕೊಂಡು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿಗಳಲ್ಲಿ ಜೀವನಕೌಶಲ್ಯವನ್ನು ಹೆಚ್ಚಿಸುವ ಹಲವು ಕಾರ್ಯಚಟುವಟಿಕೆಗಳ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳೆಲ್ಲರೂ ಇದರಲ್ಲಿ ಸಂಪೂರ್ಣ ಆಸಕ್ತಿಯಿಂದ ತಮ್ಮನ್ನು ತಾವು ತೊಡಗಿಸಿಕೊಳ್ಳಿ ಎಂದರು.ಕಳೆದ ಶೈಕ್ಷಣಿಕ ವರ್ಷದ ಕಲಾ ವಿಭಾಗದ ಸಾಧಕ ವಿದ್ಯಾರ್ಥಿಗಳ ಜತೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪಪ್ರಾಂಶುಪಾಲ ದೇವಿಚರಣ್‌ ರೈ, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಹಾಗೂ ಕಲಾ ವಿಭಾಗದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಕಲಾ ಸಂಘದ ಕಾರ್ಯದರ್ಶಿ ಯುಕ್ತಶ್ರೀ ಸ್ವಾಗತಿಸಿ, ಪ್ರಥಮ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿನಿ ಬಿಂದು. ಕೆ.ಜೆ ವಂದಿಸಿದರು. ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿನಿ ತೃಪ್ತಿ.ಎ.ಕೆ. ಕಾರ್ಯಕ್ರಮವನ್ನು ನಿರೂಪಿಸಿದರು.   

LEAVE A REPLY

Please enter your comment!
Please enter your name here