ಪುತ್ತೂರು: ಪುತ್ತೂರು ನಗರ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಸತ್ತಿಕಲ್ಲು ಎಂಬಲ್ಲಿ ಇಬ್ರಾಹಿಂ ಎಂಬವರ ಮನೆಯ ಹಿಂಬದಿಯಲ್ಲಿ ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಪಡೆದ ಪುತ್ತೂರು ನಗರ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಸ್ಥಳಕ್ಕೆ ದಾಳಿ ಮಾಡಿ ಆರೋಪಿಗಳ ಪೈಕಿ ಓರ್ವನನ್ನು ಬಂಧಿಸಿದ್ದು, ಉಳಿದ ಆರೋಪಿಗಳು ಸ್ಥಳದಿಂದ ಓಡಿ ಪರಾರಿಯಾಗಿದ್ದರು.
ಸದ್ರಿ ಆರೋಪಿಗಳ ವಿರುದ್ಧ ಕರ್ನಾಟಕ ಗೋ ಹತ್ಯೆ ನಿಷೇದ ಕಾಯ್ದೆ-2020ರ ಕಲಂ 4,7,12 ರಂತೆ ಪ್ರಕರಣ ದಾಖಲಾಗಿತ್ತು. ಸ್ಥಳದಿಂದ ಓಡಿ ಪರಾರಿಯಾಗಿ ತಲೆ ಮರೆಸಿಕೊಂಡ ಆರೋಪಿಗಳಾದ ಇಬ್ರಾಹಿಂ ಮಹಮ್ಮದ್ ಕುಂಞಿ, ಸಿದ್ದೀಕ್ , ರಂಶೀಕ್ ಎಂಬವರು ತಮ್ಮ ವಕೀಲರ ಮುಖಾಂತರ ನಿರೀಕ್ಷಣಾ ಜಾಮೀನು ಕೋರಿ 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಜಾಮೀನು ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಾಽಶರಾದ ಸರಿತಾ ಡಿ. ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ. ಆರೋಪಿಗಳ ಪರವಾಗಿ ನ್ಯಾಯವಾದಿಗಳಾದ ಇಬ್ರಾಹಿಂ ಬಾತಿಷಾ ಯು.ಕೆ. ಮತ್ತು ರಮೀಜ್ ಕರ್ವೆಲು ವಾದಿಸಿದ್ದರು.