ಗ್ರಾ.ಪಂ.ಕಾರ್ಯದರ್ಶಿಗಳು ಜನನ‌-ಮರಣ ಉಪನೊಂದಾಣಾಧಿಕಾರಿಗಳಾಗಿ ಕಾರ್ಯನಿರ್ವಹಿಸುವಂತೆ ಸುತ್ತೋಲೆ

0

ಬೆಂಗಳೂರು: ಗ್ರಾಮ ಪಂಚಾಯತ್ ಕಾರ್ಯದರ್ಶಿಗಳು ಜನನ, ಮರಣ ಉಪ ನೋಂದಣಾಧಿಕಾರಿಗಳಾಗಿ ಕಾರ್ಯನಿರ್ವಹಿಸುವಂತೆ ಜನನ ಮರಣಗಳ ಮುಖ್ಯ ನೋಂದಣಾಧಿಕಾರಿ ಹಾಗೂ ಅಪರ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಪ್ರಸಕ್ತ ಸಾಲಿನ ಜು.1ರಿಂದ ಜಾರಿಗೆ ಬರುವಂತೆ ಗ್ರಾಮೀಣ ಪ್ರದೇಶಕ್ಕೆ ಅನ್ವಯವಾಗುವಂತೆ ಸರಕಾರದ ಈ ಆದೇಶವನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಗ್ರಾಮ ಪಂಚಾಯತ್ ಕಾರ್ಯದರ್ಶಿಗಳು ಈ ಕೆಳಕಂಡ ಅಂಶಗಳನ್ನು ಪಾಲಿಸುವಂತೆ ತಿಳಿಸಲಾಗಿದೆ.

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಘಟಿಸುವ ಜನನ, ಮರಣ ಘಟನೆಗಳು ಸಂಭವಿಸಿದ 30 ದಿನಗಳೊಳಗೆ ಜನನ, ಮರಣ ಉಪನೋಂದಣಾಧಿಕಾರಿಗಳಾದ ಗ್ರಾಮ ಪಂಚಾಯತ್ ಕಾರ್ಯದರ್ಶಿಗಳು ನಿಯಮಾನುಸಾರ ನೋಂದಣಿ ಮಾಡಬೇಕು. ಘಟನೆ ಸಂಭವಿಸಿದ 21 ದಿನಗಳೊಳಗೆ ಜನನ, ಮರಣ ಘಟನೆಗಳನ್ನು ನೋಂದಣಿ ಮಾಡಿ ಉಚಿತವಾಗಿ ಒಂದು ಪ್ರಮಾಣ ಪತ್ರವನ್ನು ವಿತರಿಸಬೇಕು.

21 ದಿನಗಳ ತರುವಾಯ ಮತ್ತು 30 ದಿನಗಳೊಳಗಾಗಿ ವರದಿಯಾಗುವ ಘಟನೆಗಳನ್ನು 2 ರೂ. ಶುಲ್ಕ ಪಡೆದು ನೋಂದಾಯಿಸಬೇಕು. 30 ದಿನಗಳ ತರುವಾಯ ವರದಿಯಾಗುವ ಘಟನೆಗಳನ್ನು ನೋಂದಣಿ ಮಾಡುವಂತಿಲ್ಲ. ಆ ಘಟನೆಗಳ ನೊಂದಣಿಗೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳೊಂದಿಗೆ ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸಬೇಕಾಗಿರುವ ಹಿನ್ನೆಲೆಯಲ್ಲಿ ಈ ಕುರಿತು ಸಾರ್ವಜನಿಕರಿಗೆ ಹಾಗೂ ಅರ್ಜಿದಾರರಿಗೆ  ನೀಡಬೇಕು.

30 ದಿನಗಳ ನಂತರ ವರದಿಯಾಗುವ ಘಟನೆಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ಈ ಕೆಳಕಂಡಂತೆ ನೋಂದಣಿ ಮಾಡಬೇಕು. 30 ದಿನಗಳ ತರುವಾಯ ಒಂದು ವರ್ಷದ ಒಳಗೆ ವರದಿಯಾಗುವ ಜನನ, ಮರಣ ಹಾಗೂ ನಿರ್ಜೀವ ಜನನಗಳನ್ನು ತಹಶೀಲ್ದಾರರ ಲಿಖಿತ ಅನುಮತಿಯೊಂದಿಗೆ 5 ರೂ. ತಡೆ ಶುಲ್ಕ ಪಡೆದು ನೋಂದಾಯಿಸಬೇಕು.

ಒಂದು ವರ್ಷದ ನಂತರ ವರದಿಯಾಗುವ ಜನನ, ಮರಣ ಘಟನೆಗಳಿಗೆ ವಿಳಂಬ ನೋಂದಣಿ ಮಾಡಲು ಮೊದಲನೇ ವರ್ಗದ ದಂಡಾಧಿಕಾರಿ ಅಥವಾ ಮಹಾ ಪ್ರಾಂತ ದಂಡಾಧಿಕಾರಿಯ ಆದೇಶದೊಂದಿಗೆ 10 ರೂ. ತಡೆ ಶುಲ್ಕ ಪಡೆದು ನೋಂದಾಯಿಸಬೇಕು. ಜನನ, ಮರಣ ನೋಂದಣಿ ಸಂಬಂಧ ಯಾವುದಾದರೂ ಸಂದೇಹ, ಸ್ಪಷ್ಟಿಕರಣ ಅವಶ್ಯ ಇದ್ದಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿ ಹಾಗೂ ಜನನ, ಮರಣಗಳ ಮುಖ್ಯ ನೋಂದಣಾಧಿಕಾರಿ ಕಚೇರಿಯನ್ನು ಸಂಪರ್ಕಿಸಬೇಕು.

ಜನನ, ಮರಣ ಮತ್ತು ನಿರ್ಜೀವ ಜನನಗಳ ನೋಂದಣಿ ಸಂದರ್ಭದಲ್ಲಿ ಇ-ಜನ್ಮ ತಂತ್ರಾಂಶದಲ್ಲಿ ತಾಂತ್ರಿಕ ಸಮಸ್ಯೆಗಳು ಕಂಡು ಬಂದಲ್ಲಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿ ಅಥವಾ ಇ-ಜನ್ಮ ಸಹಾಯವಾಣಿ ಹಾಗೂ ಇ-ಮೇಲ್ [email protected]/ejanmahelp- [email protected] ಮತ್ತು ದೂರವಾಣಿ ಸಂಖ್ಯೆ 1800-425-6578ಕ್ಕೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here