ಪ್ರೌಢಶಾಲಾ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

0

ರಾಮಕುಂಜ ಕ.ಮಾ.ಪ್ರೌಢಶಾಲಾ ಬಾಲಕರ ತಂಡ ಪ್ರಥಮ, ಬಾಲಕಿಯರ ತಂಡ ದ್ವಿತೀಯ

ರಾಮಕುಂಜ: ಟೀಮ್ ಭಗವತಿ ನೇತೃತ್ವದಲ್ಲಿ ಭಗವತಿ ಹೈಸ್ಕೂಲ್ ಸಂಕೋಲಿಯಲ್ಲಿ ನಡೆದ ಪ್ರೌಢಶಾಲಾ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಬಾಲಕರ ತಂಡವು ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿದೆ.


ಬಾಲಕರ ತಂಡದ ಮಹಾಂತೇಶ್ ಬೆಸ್ಟ್ ರೈಡರ್ ಮತ್ತು ವೀರೇಶ್ ಮನೋಜ್ ತೋರಣಕಟ್ಟೆ ಬೆಸ್ಟ್ ಕ್ಯಾಚರ್ ಹಾಗೂ ಬಾಲಕಿಯರ ತಂಡದ ರಮ್ಯ ಬೆಸ್ಟ್ ರೈಡರ್ ಮತ್ತು ವರ್ಷ ಬೆಸ್ಟ್ ಕ್ಯಾಚರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಿಗೆ ಮಾಧವ ಬಿ.ಕೆ, ಜಸ್ವಂತ್ ಹಾಗೂ ಮಂಜುನಾಥ್ ತರಬೇತಿ ನೀಡಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲಾ ರೈ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಮುಖ್ಯಗುರು ಸತೀಶ್ ಭಟ್, ಶಾಲಾ ಶಿಕ್ಷಕ ವೃಂದದವರು, ಆಡಳಿತ ಮಂಡಳಿಯವರು, ಶಾಲಾ-ಪೋಷಕರು, ಹಿರಿಯ ವಿದ್ಯಾರ್ಥಿಗಳು ಸಹಕರಿಸಿದ್ದರು.

LEAVE A REPLY

Please enter your comment!
Please enter your name here