ಅಳಕೆಮಜಲು ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

0

ವಿಟ್ಲ: ಅಳಕೆಮಜಲು ಅಶೋಕನಗರ ಶ್ರೀ ಶಾರದಾಂಭ ಭಜನಾ ಮಂದಿರ ಹಾಗೂ ಮೈಸೂರಿನ ಎಸ್.ಎಲ್.ವಿ ಬುಕ್ಸ್ ಇಂಡಿಯನ್ ಪ್ರೈ.ಲಿ. ನ ಸಹಯೋಗದೊಂದಿಗೆ ಅಳಕೆಮಜಲು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಿಸಲಾಯಿತು.

ಪ್ರಮುಖರಾದ ಪಿ. ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪದ್ಮನಾಭ ಸಫಲ್ಯ, ಭಜನಾ ಮಂದಿರದ ಅಧ್ಯಕ್ಷ ಜಗದೀಶ ಪೂಜಾರಿ ಅಳಕೆಮಜಲು, ಉದ್ಯಮಿ ಪ್ರವೀಣ್ ಶೆಟ್ಟಿ ಅಳಕೆಮಜಲು, ಶಾಲಾ ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ತಿರುಮಲೇಶ್ವರ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.
ಈ‌ ಸಂದರ್ಭದಲ್ಲಿ ಎಲ್.ಕೆ.ಜಿ.ಯಿಂದ ಐದನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಿಸಲಾಯಿತು.
ಶಾಲಾ ಮುಖ್ಯೋಪಾದ್ಯಾಯರಾದ ಇಸ್ಮಾಯಿಲ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕಿ ಜಯಂತಿ ನಾಯ್ಕ ಸ್ವಾಗತಿಸಿ, ರಾಜೀವಿ ವಂದಿಸಿದರು.

LEAVE A REPLY

Please enter your comment!
Please enter your name here