ನಗರಸಭೆ ಜಲಸಿರಿ ನೀರು ಸರಬರಾಜು ಯೋಜನೆ ಪ್ರಗತಿ ಪರಿಶೀಲನಾ ಸಭೆ – ಸಭಾತ್ಯಾಗ ಮಾಡಿದ ಬಿಜೆಪಿ ಸದಸ್ಯರು

0

ಪುತ್ತೂರು: ಜಲಸಿರಿ ನೀರು ಸರಬರಾಜು ಯೋಜನೆ ಪ್ರಗತಿ ಪರಿಶೀಲನಾ ಸಭೆಗೆ ಶಾಸಕ ಅಶೋಕ್‌ ಕುಮಾರ್‌ ರೈ ಆಗಮಿಸುವಾಗ ವಿಳಂಬವಾಯಿತೆಂದು ನಗರಸಭೆ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದ್ದಾರೆ.

ನಗರಸಭೆಯ 24/7 ಜಲಸಿರಿ ನೀರು ಸರಬರಾಜು ಯೋಜನೆಯ ಪ್ರಗತಿ ಪರಿಶೀಲನೆ ಸಭೆ ಇಂದು (ಜೂ.25) ಮಧ್ಯಾಹ್ನ 3 ಗಂಟೆಗೆ ನಿಗದಿಯಾಗಿತ್ತು. ನಗರಸಭೆ ಕಚೇರಿ ಸಭಾಭವನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆಯಲ್ಲಿ ಸಭೆ ನಡೆಯಬೇಕಾಗಿತ್ತು. ಆದರೆ ಶಾಸಕರು ಸಭೆಗೆ ಬರುವುದು ತಡವಾಯಿತೆಂದು ಆರೋಪಿಸಿದ ನಗರಸಭೆ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದ್ದಾರೆ.

LEAVE A REPLY

Please enter your comment!
Please enter your name here