ಮೈರ: ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ: ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ

0

ವಿಟ್ಲ: ಚಾಲಕನಿಗೆ ಹೃದಯಾಘಾತ ಸಂಭವಿಸಿದ ಹಿನ್ನಲೆ ನಿಯಂತ್ರಣ ತಪ್ಪಿದ ಲಾರಿಯೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಮೈರ ಎಂಬಲ್ಲಿ ನಡೆದಿದೆ.

ಘಟನೆಯಿಂದಾಗಿ ಲಾರಿ ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಯಿಂದಾಗಿ ವಿದ್ಯುತ್ ಕಂಬ ಮುರಿದಿದ್ದು, ಲಾರಿಯ ಮುಂಭಾಗಕ್ಕೆ ಹಾನಿಯಾಗಿದೆ.
ಘಟನಾ‌ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here