ಮಂಗಳೂರು:ದ.ಕ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಜೂ.27ರಂದು ರಜೆ ಘೋಷಿಸಲಾಗಿದೆ.ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.