ಸವಣೂರು : ಸವಣೂರು ಗ್ರಾ.ಪಂ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಪಾಲ್ತಾಡಿ (ಅಂಕತ್ತಡ್ಕ) ಇದರ ವತಿಯಿಂದ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದ ಅಂಗವಾಗಿ ಮಲೇರಿಯಾ ವಿರೋಧ ಮಾಸಾಚರಣೆಯ ಅಂಗವಾಗಿ ಸವಣೂರು ಗ್ರಾ.ಪಂ.ನ ಕುಮಾರಧಾರ ಸಭಾಂಗಣದಲ್ಲಿ ಮಾಹಿತಿ ಕಾರ್ಯಕ್ರಮ ಜೂ.27ರಂದು ನಡೆಯಿತು.
ಕಾರ್ಯಕ್ರಮದಲ್ಲಿ ಪಾಲ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಧುಶ್ರೀ ಅವರು ಮಾಹಿತಿ ನೀಡಿದರು. ವೇದಿಕೆಯಲ್ಲಿ ಸವಣೂರು ಗ್ರಾ.ಪಂ.ಅಧ್ಯಕ್ಷೆ ಸುಂದರಿ ಬಿ.ಎಸ್,ಉಪಾಧ್ಯಕ್ಷೆ ಜಯಶ್ರೀ ,ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಸಂದೇಶ್ ಕೆ.ಎನ್ ,ಲೆಕ್ಕಸಹಾಯಕ ಎ.ಮನ್ಮಥ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಗ್ರಾ.ಪಂ.ಸದಸ್ಯರಾದ ಶೀನಪ್ಪ ಶೆಟ್ಟಿ ನೆಕ್ರಾಜೆ ,ತಾರಾನಾಥ ಬೊಳಿಯಾಲ,ಶ್ರೀರಾಮ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ವಿಜಯ ಈಶ್ವರ ಗೌಡ,ಕಾರ್ಯದರ್ಶಿ ಪೂರ್ಣಿಮಾ ಮಹೇಶ್ ಹಾಗೂ ಸದಸ್ಯರು ,ಆಶಾ ಕಾರ್ಯಕರ್ತೆಯರು,ಆರೋಗ್ಯ ಕಾರ್ಯಕರ್ತೆಯರು,ಗ್ರಾ.ಪಂ.ಸಿಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.