ಕೊಡಗು ಜಿಲ್ಲೆಯಲ್ಲಿ ಭಾರೀ ವರ್ಷ ಧಾರೆ – ಭಾಗಮಂಡಲ ತ್ರಿವೇಣಿ ಸಂಗಮ‌ ಜಲಾವೃತ

0

ಮಂಗಳೂರು/ಮಡಿಕೇರಿ: ಕರ್ನಾಟಕದಲ್ಲಿ ಮುಂಗಾರು ಮಳೆ ಜೋರಾಗಿದೆ. ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿರುವುದರಿಂದ ನದಿಗಳಿಗೆ ಒಳ ಹರಿವು ಹೆಚ್ಚಿದೆ. ಇದರಿಂದ ನದಿಗಳು ತುಂಬಿ ಹರಿಯುತ್ತಿವೆ. ಈ ಹೊತ್ತಿನಲ್ಲಿ ನದಿಗಳಿಗೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ . ಇದರಿಂದ ನದಿಗಳು ತುಂಬಿ ಹರಿಯುತ್ತಿವೆ. ಕುಮಾರಧಾರ, ಲಕ್ಷ್ಮಣ ತೀರ್ಥ, ಕಾವೇರಿ, ನೇತ್ರಾವತಿ ನದಿಗಳು ತುಂಬಿ ಹರಿಯುತ್ತಿರುವುದರಿಂದ ಸ್ಥಳೀಯರು ಮತ್ತು ಪ್ರವಾಸಿಗರು ನದಿಗಳಿಗೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವತ್ತಿರುವ ಹಿನ್ನೆಲೆಯಲ್ಲಿ ಘಟ್ಟ ಪ್ರದೇಶದಿಂದ ಭಾರಿ ಪ್ರಮಾಣದಲ್ಲಿ ಹರಿದು ನೀರು ಬಂದು, ಜಿಲ್ಲೆಯ ಜೀವನದಿ ನೇತ್ರಾವತಿಗೆ ಸೇರುತ್ತಿದೆ. ಹೀಗಾಗಿ, ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿರುವುದರಿಂದ ಜನ ಎಚ್ಚರಿಕೆಯಿಂದ ಇರಬೇಕು ಮತ್ತು ನದಿ ತೀರದ ಜನರು ನದಿಗೆ ಇಳಿಯದಂತೆ ಸೂಚನೆ ನೀಡಿದೆ.

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನಲ್ಲಿ ಮಳೆ ಅಬ್ಬರ ಜೋರಾಗಿದೆ ಭಾರಿ ಮಳೆಗೆ ಲಕ್ಷ್ಮಣ ತೀರ್ಥ ನದಿ ತುಂಬಿ ಹರಿಯುತ್ತಿದೆ. ನದಿಗೆ ಒಳ ಹರಿವು ಅಧಿಕವಾದರೆ ಹನಗೋಡು ಬಳಿ ಇರುವ ಅಣೆಕಟ್ಟು ಮುಳುಗಡೆಯಾಗುವ ಸಾಧ್ಯತೆ ಇದೆ. ಕೊಡಗು ಜಿಲ್ಲೆಯಲ್ಲಿ ಭಾರೀ ವರ್ಷ ಧಾರೆ ಹಿನ್ನೆಲೆಯಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಮಡಿಕೇರಿ ತಾಲೂಕಿನ ಭಾಗಮಂಡಲ ತ್ರಿವೇಣಿ ಸಂಗಮ‌ ಜಲಾವೃತಗೊಂಡಿದೆ. ಭಾಗಮಂಡಲ ಸ್ನಾನ ಘಟ್ಟ ಮುಳುಗಡೆಯಾಗಿದೆ. ಭಾಗಮಂಡಲ – ನಾಪೋಕ್ಲು ರಸ್ತೆ ಮೇಲೆ ನೀರು ಹರಿಯುತ್ತಿದೆ. ಮಳೆ ಆರ್ಭಟಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿತ ಸಿದ್ದಾಪುರ ತಾಲೂಕಿನ ಹಸ್ವಿಗುಳಿ ಗ್ರಾಮದಲ್ಲಿ ಗುಡ್ಡ ಕುಸಿತವಾಗಿದೆ. ಗ್ರಾಮದ ವೆಂಕಟರಮಣ ತಿಮ್ಮನಾಯ್ಕ, ಸದಾನಂದ ತಿಮ್ಮನಾಯ್ಕ, ಪಾರ್ವತಿ ತಿಮ್ಮನಾಯ್ಕ ಅವರ ಮನೆ ಹಿಂದೆ ಗುಡ್ಡ ಕುಸಿತವಾಗಿದ್ದು, ಅದೃಷ್ಟವಶಾತ್ ಈ ಸಮಯದಲ್ಲಿ​ ಮನೆಯಲ್ಲಿ ಯಾರೂ ಇಲ್ಲದೆ ಇದ್ದುದರಿಂದ ಸಂಭವಿಸಬಹುದಾಗಿದ್ದ ಅನಾಹುತ ತಪ್ಪಿದೆ.

LEAVE A REPLY

Please enter your comment!
Please enter your name here