ಮಂಗಳೂರು/ನವದೆಹಲಿ: ಮಾಜಿ ಉಪ ಪ್ರಧಾನಿ, ಎಲ್. ಕೆ ಅಡ್ವಾಣಿ ಅವರನ್ನು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆ ಏಮ್ಸ್ಗೆ ಬುಧವಾರ ರಾತ್ರಿ ದಾಖಲಿಸಲಾಗಿದೆ.

ಅಡ್ವಾಣಿ ಆರೋಗ್ಯ ಸ್ಥಿರವಾಗಿದೆ ಮತ್ತು ಸದ್ಯ ಅಬ್ಸರ್ವೇಷನ್ನಲ್ಲಿದ್ದಾರೆ ಎಂದು ಏಮ್ಸ್ ಪ್ರಕಟಣೆಯಲ್ಲಿ ತಿಳಿಸಿದೆ. 96 ವರ್ಷ ವಯಸ್ಸಿನ ಅಡ್ವಾಣಿ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎನ್ನಲಾಗಿದ್ದು ಅವರ ಆರೋಗ್ಯ ಸ್ಥಿತಿಯ ಕುರಿತು ಆಸ್ಪತ್ರೆ ಹೆಚ್ಚಿನ ವಿವರ ನೀಡಿಲ್ಲ.
UPDATE
ಎಲ್ ಕೆ ಅಡ್ವಾಣಿ ಅವರು ಚೇತರಿಸಿಕೊಂಡಿದ್ದು ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಯಿಂದ ಇಂದು ಮದ್ಯಾಹ್ನ ಬಿಡುಗಡೆ ಮಾಡಲಾಗಿದೆ.