ಬಪ್ಪಳಿಗೆ ಅಂಬಿಕಾ ಪ.ಪೂ.ವಿದ್ಯಾಲಯದಲ್ಲಿ ಲಾಂಡ್ರಿ ವ್ಯವಸ್ಥೆ ಉದ್ಘಾಟನೆ

0

ಶುಚಿಯಾದ ಬಟ್ಟೆಯೂ ವಿದ್ಯಾರ್ಥಿಗಳ ಓದಿಗೆ ಪೂರಕವಾದದ್ದು : ಪ್ರಸನ್ನ ಭಟ್

ಪುತ್ತೂರು: ಭಜನೆ, ಪ್ರಾರ್ಥನೆ, ಧ್ಯಾನ ಮನಸ್ಸನ್ನು ಶುಚಿಯಾಗಿಟ್ಟುಕೊಳ್ಳಲು ಹೇಗೆ ಸಹಕಾರಿಯೋ ಹಾಗೆಯೇ ಶುಚಿಯಾದ ಬಟ್ಟೆಯೂ ಕೂಡಾ ನಮ್ಮ ಮನಸ್ಸನ್ನು ಶುಚಿಯಾಗಿಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಮನಸ್ಸು ಶುಚಿಯಾಗಿದ್ದರೆ ಮಾತ್ರ ಮಾಡುವ ವಿದ್ಯಾಭ್ಯಾಸ ಉತ್ತಮವಾಗಿರುತ್ತದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಸದಸ್ಯ ಪ್ರಸನ್ನ ಭಟ್ ಹೇಳಿದರು.

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನೆಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಸತಿಯುತ ಪದವಿಪೂರ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಓದುವಿಕೆಗೆ ಪೂರಕವಾಗುವ ನಿಟ್ಟಿನಲ್ಲಿ ಅಳವಡಿಸಿರುವ ಲಾಂಡ್ರಿ ವ್ಯವಸ್ಥೆಯನ್ನು ಉದ್ಘಾಟಿಸಿ ಸೋಮವಾರ ಮಾತನಾಡಿದರು.
ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಅನುಕೂಲವಾಗುವ ನಿಟ್ಟಿನಲ್ಲಿ ನೂತನ ವ್ಯವಸ್ಥೆಯೊಂದನ್ನು ಅಳವಡಿಸಲಾಗಿದೆ. ವಿದ್ಯಾರ್ಥಿಗಳು ಈ ವ್ಯವಸ್ಥೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರಲ್ಲದೆ ಬಟ್ಟೆಗಳನ್ನು ತೊಳೆದು ಒಣಗಿಸಿಕೊಡುವ ಆಧುನಿಕ ತಾಂತ್ರಿಕೃತ ವ್ಯವಸ್ಥೆಯನ್ನು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಅಂಬಿಕಾ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ., ಕ್ಯಾಂಪಸ್ ನಿರ್ದೇಶಕ ರಾಜೇಂದ್ರ ಪ್ರಸಾದ್ ಉಪಸ್ಥಿತರಿದ್ದರು. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ವೈಷ್ಣವಿ, ಕಾವ್ಯಲಕ್ಷ್ಮಿ,ಪ್ರಣತಿ. ಎ., ವರ್ಷಿಣಿ ಮತ್ತು ನಂದನ ಪ್ರಾರ್ಥಿಸಿದರು. ಕಾಲೇಜಿನ ಉಪಪ್ರಾಂಶುಪಾಲ ಗಣೇಶ್ ಪ್ರಸಾದ್ ಡಿ. ಎಸ್. ಕಾರ್ಯಕ್ರಮವನ್ನು ನಿರ್ವಹಿಸಿದರು.

LEAVE A REPLY

Please enter your comment!
Please enter your name here