ಗೋಪಣ್ಣ ಸ್ಮೃತಿ ಗೌರವಕ್ಕೆ ಲಕ್ಷ್ಮೀಶ ಅಮ್ಮಣ್ಣಾಯ ಆಯ್ಕೆ -ಜು.3ರಂದು ಗೌರವ ಪ್ರದಾನ

0

ಪುತ್ತೂರು: ಯಕ್ಷಗಾನದ ವಾದನ ಪರಿಕರಕ್ಕೆ ಮತ್ತು ವಾದನಕ್ಕೆ ಹೊಸ ಆಯಾಮವನ್ನು ತೋರಿದ ಪುತ್ತೂರು ಗೋಪಾಲಕೃಷ್ಣಯ್ಯ ಯಾ ಗೋಪಣ್ಣ ಇವರ ಸ್ಮೃತಿ ಕಾರ‍್ಯಕ್ರಮವು ಜು.3ರಂದು ಅಪರಾಹ್ನ ಗಂಟೆ 2ಕ್ಕೆ ಪುತ್ತೂರಿನ ಬಪ್ಪಳಿಗೆ ‘ಅಗ್ರಹಾರ’ ನಿವಾಸದಲ್ಲಿ ನಡೆಯಲಿದ್ದು, ಈ ಕಾರ‍್ಯಕ್ರಮದಲ್ಲಿ ಯಕ್ಷಗಾನದ ಹಿರಿಯ ಮದ್ಲೆಗಾರ ಲಕ್ಷ್ಮೀಶ ಅಮ್ಮಣ್ಣಾಯ ಅವರಿಗೆ ‘ಗೋಪಣ್ಣ ಸ್ಮೃತಿ ಗೌರವ’ವನ್ನು ಪ್ರದಾನಿಸಲಾಗುವುದು. ಸಮಾರಂಭದ ಬಳಿಕ ತಾಳಮದ್ದಳೆ ನಡೆಯಲಿದೆ.


ಹಿರಿಯ ಕಲಾವಿದ ಲಕ್ಷ್ಮೀಶ ಅಮ್ಮಣ್ಣಾಯರು ಉಪ್ಪಿನಗಂಡಿ ಸನಿಹದ ಇಳಂತಿಲದವರು. ಇವರು ಶ್ರೀ ಧರ್ಮಸ್ಥಳ, ಮಂಗಳಾದೇವಿ, ಬಪ್ಪನಾಡು, ಪುತ್ತೂರು, ಅರುವ, ಕರ್ನಾಟಕ, ಕುಂಬಳೆ, ಕದ್ರಿ ಮೇಳಗಳಲ್ಲಿ ಇಪ್ಪತ್ತೆರಡು ವರುಷದ ಮೇಳ ತಿರುಗಾಟ. ಬಳಿಕ ಹವ್ಯಾಸಿ ರಂಗದಲ್ಲಿ ಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಲಕ್ಷ್ಮೀಶ ಅಮ್ಮಣ್ಣಾಯರಿಗೆ ಪುತ್ತೂರು ಬಪ್ಪಳಿಗೆ ಸನಿಹದ ‘ಅಗ್ರಹಾರ’ದಲ್ಲಿ ಜು.3ರಂದು ಗೌರವ ಪ್ರದಾನ. ಹಿಂದಿನ ವರುಷಗಳಲ್ಲಿ ಗೋಪಣ್ಣ ನೆನಪಿನ ಗೌರವವನ್ನು ದೇವದರ್ಜಿ ಅಳಕೆ ನಾರಾಯಣ ರಾವ್, ಮದ್ಲೆಗಾರ ವೆಂಕಟೇಶ ಉಳಿತ್ತಾಯರು, ಜ್ಯೋತಿಷಿ ಗಣಪತಿ ಭಟ್, ಅರ್ಥದಾರಿ ಪಾವಲಕೋಡಿ ಗಣಪತಿ ಭಟ್, ಯಕ್ಷಗುರು ಮೋಹನ ಬೈಪಾಡಿತ್ತಾಯರು, ಮದ್ಲೆಗಾರ ಪದ್ಯಾಣ ಜಯರಾಮ ಭಟ್, ಅಧ್ಯಾಪಿಕೆ ಶ್ರೀಮತಿ ಬಿ. ಸುಲೋಚನಾ ಹಾಗೂ ಭಾಗವತ, ಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ಪ್ರದಾನ ಮಾಡಲಾಗಿತ್ತು. ಗೋಪಣ್ಣ ಅವರ ಪುತ್ರ ನಗರಸಭಾ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್ ಕುಟುಂಬವು ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.

LEAVE A REPLY

Please enter your comment!
Please enter your name here