ಕೊಡಗು: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಮಡಿಕೇರಿ ತಾಲ್ಲೂಕಿನ ಕೊಯನಾಡು ಗ್ರಾಮದಲ್ಲಿ ಶಾಲೆಯ ಹಿಂಬದಿ ಗುಡ್ಡ ಕುಸಿತ ಉಂಟಾಗಿದೆ. ಪರಿಣಾಮ ಕಟ್ಟಡದ ಗೋಡೆ ಮತ್ತು ಕಿಟಕಿಗಳು ಹಾನಿಯಾಗಿವೆ. ಶಾಲೆಗೆ ರಜೆ ಇದ್ದಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಪ್ರಸಿದ್ಧ ದುಬಾರೆ ಪ್ರವಾಸಿ ತಾಣಕ್ಕೆ ಪ್ರವೇಶ ನಿಷೇಧಿಸಲಾಗಿದೆ. ಪ್ರವಾಹ, ಗುಡ್ಡ ಕುಸಿತ, ಮರ, ವಿದ್ಯುತ್ ಕಂಬಗಳು ಧರೆಗುರುಳಿದ್ದು, ಪ್ರವಾಸಿತಾಣಗಳಿಗೂ ನಿರ್ಬಂಧ ವಿಧಿಸಲಾಗಿದೆ. ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಭಾರಿ ಮಳೆಯಿಂದ ಸರ್ಕಾರಿ ಶಾಲಾ ಕೊಠಡಿ ಮೇಲೆ ಗುಡ್ಡ ಕುಸಿತ ಉಂಟಾಗಿದೆ. ಮಡಿಕೇರಿ ತಾಲೂಕಿನ ಕೊಯನಾಡು ಗ್ರಾಮದಲ್ಲಿ ಘಟನೆ ನಡೆದಿದೆ. ಕಟ್ಟಡದ ಗೋಡೆ ಮತ್ತು ಕಿಟಕಿಗೆ ಹಾನಿಯಾಗಿದೆ. ಇಂದು ಶಾಲೆಗೆ ರಜೆ ಇದ್ದಿದ್ದರಿಂದ ಭಾರೀ ಅನಾಹುತ ತಪ್ಪಿದೆ.
ಜಿಲ್ಲೆಯಾದ್ಯಂತ ಇಂದು ಅಂಗನವಾಡಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗೆ ರಜೆ ಘೋಷಿಸಲಾಗಿದೆ. ನಾಳೆ ಮತ್ತು ನಾಡಿದ್ದು ಜಿಲ್ಲೆಯಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದ್ದು ಗುಡ್ಡ ಪ್ರದೇಶದ ಹಾಗೂ ನದಿ ತೀರದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.