ಪುತ್ತೂರು:ಕಳೆದ ಕೆಲ ದಿನಗಳಿಂದ ಮಳೆಯ ಅಬ್ಬರ ಮುಂದುವರಿದ್ದು ಮುನ್ನೆಚ್ಚರಿಕ ಕ್ರಮವಾಗಿ ಜೂ.28ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿಗಳು, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧೀಕಾರದ ಅಧ್ಯಕ್ಷರೂ ಆಗಿರುವ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜೂ.28ರಂದು ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ಈ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಲಾಗಿದೆ.