ಜೂ.29: ತಾಲೂಕು ಬಿಲ್ಲವ ಸಂಘ, ಬಿಲ್ಲವ ನಗರ ಸಮಿತಿಯಿಂದ ವಾರ್ಷಿಕ ಮಹಾಸಭೆ,ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ, ಅಭಿನಂದನಾ ಕಾರ್ಯಕ್ರಮ

0

ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಹಾಗೂ ಬಿಲ್ಲವ ನಗರ ಸಮಿತಿ ಪುತ್ತೂರು ಇದರ ಆಶ್ರಯದಲ್ಲಿ ವಾರ್ಷಿಕ ಮಹಾಸಭೆ, ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಕಾರ್ಯಕ್ರಮವು ಜೂ.29 ರಂದು ಅಪರಾಹ್ನ ಬಪ್ಪಳಿಗೆ-ಪುತ್ತೂರು ಇಲ್ಲಿನ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ಜರಗಲಿದೆ.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಲ್ಲವ ನಗರ ಸಮಿತಿ ಅಧ್ಯಕ್ಷ ಕೇಶವ ಪೂಜಾರಿ ಬೆದ್ರಾಳರವರು ವಹಿಸಿಕೊಳ್ಳಲಿದ್ದಾರೆ. ಉದ್ಘಾಟನೆಯನ್ನು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿರವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೆಸ್ಕಾಂ ಪುತ್ತೂರು ನಗರ ಶಾಖೆಯ ಸಹಾಯಕ ಇಂಜಿನಿಯರ್ ರಾಜೇಶ್ ಕೆ, ಅತಿಥಿಗಳಾಗಿ ತಾಲೂಕು ಬಿಲ್ಲವ ಸಂಘದ ಉಪಾಧ್ಯಕ್ಷ ಅಶೋಕ್ ಕುಮಾರ್ ಪಡ್ಪು, ಕಾರ್ಯದರ್ಶಿ ಚಿದಾನಂದ ಸುವರ್ಣ ಗೆಣಸಿನಕುಮೇರು, ಜೊತೆ ಕಾರ್ಯದರ್ಶಿ ದಯಾನಂದ ಕರ್ಕೇರಾ, ಕೋಶಾಧಿಕಾರಿ ಬಿ.ಟಿ ಮಹೇಶ್ಚಂದ್ರ ಸಾಲ್ಯಾನ್ ನಡುಬೈಲುಗುತ್ತು, ಬ್ರಹ್ಮಶ್ರೀ ನಾರಾಯಣ ಗುರುಮಂದಿರದ ಕಾರ್ಯನಿರ್ವಹಣಾಧಿಕಾರಿ ಉದಯಕುಮಾರ್ ಕೋಲಾಡಿ, ಬಿಲ್ಲವ ನಗರ ಸಮಿತಿಯ ಪುತ್ತೂರು ವಲಯ ಸಂಚಾಲಕ ಕಿರಣ್ ಪೂಜಾರಿ ಬಲ್ನಾಡು, ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷ ಜಯರಾಮ ಬಿ.ಎನ್‌ರವರು ಭಾಗವಹಿಸಲಿದ್ದಾರೆ ಎಂದು ಬಿಲ್ಲವ ನಗರ ಸಮಿತಿಯ ಪದಾಧಿಕಾರಿಗಳು, ಬಿಲ್ಲವ ಮಹಿಳಾ ಘಟಕ ಪುತ್ತೂರು ನಗರ ಸಮಿತಿಯ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಗುವುದು. ಉಚಿತ ಪುಸ್ತಕ ಪಡೆಯುವ ವಿದ್ಯಾರ್ಥಿಗಳು ಕಡ್ಡಾಯವಾಗಿ ವಿದ್ಯಾರ್ಥಿಗಳ ಪೋಷಕರೊಂದಿಗೆ ಹಾಜರಾಗಬೇಕು. ವಿದ್ಯಾರ್ಥಿಗಳು ಗೈರು ಹಾಜರಾದರೆ ಪುಸ್ತಕ ನೀಡಲಾಗುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here