ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಮಾದಕ ದ್ರವ್ಯ ಹಾಗೂ ಅಕ್ರಮ ಸಾಗಾಟ ವಿರೋಧಿ ದಿನಾಚರಣೆ

0

ಉಪ್ಪಿನಂಗಡಿ: ಕರ್ನಾಟಕ ರಾಜ್ಯ ಪೋಲಿಸ್ ದ.ಕ.ಜಿಲ್ಲೆ ಉಪ್ಪಿನಂಗಡಿ ಪೋಲಿಸ್ ಠಾಣೆ ಇದರ ವತಿಯಿಂದ ಮಾದಕ ದ್ರವ್ಯ ಹಾಗೂ ಅಕ್ರಮ ಸಾಗಾಟ ದಿನಾಚರಣೆಯ ಪ್ರಯುಕ್ತ ಇಲ್ಲಿನ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಪೋಲಿಸ್ ಇನ್ಸ್‌ಪೆಕ್ಟರ್ ರವಿ ಬಿ.ಎಸ್ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯದ ಕುರಿತು ಜಾಗೃತಿ ಮೂಡಿಸಿದರು.


ಈ ಕಾರ್ಯಕ್ರಮದಲ್ಲಿ ಸಬ್ ಇನ್‌ಪೆಕ್ಟರ್ ಅವಿನಾಶ್ ಗೌಡ ಹಾಗೂ ಮುಖ್ಯ ಶಿಕ್ಷಕಿ ವೀಣಾ ಆರ್.ಪ್ರಸಾದ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಂಸ್ಥೆಯ ಶಿಕ್ಷಕ -ಶಿಕ್ಷಕೇತರ ವೃಂದವರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here