ಉಪ್ಪಳಿಗೆ ಸರಕಾರಿ ಪ್ರೌಢಶಾಲೆಯಲ್ಲಿ ಶೇ.100 ಫಲಿತಾಂಶ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ

0

ಪುತ್ತೂರು:ಸತತ ಒಂಬತ್ತು ವರ್ಷಗಳಿಂದ ಶೇ.100 ಫಲಿತಾಂಶ ದಾಖಲಿಸುತ್ತಿರುವ ಇರ್ದೆ-ಉಪ್ಪಳಿಗೆ ಸರಕಾರಿ ಪ್ರೌಢಶಾಲಾ 2023-24ನೇ ಸಾಲಿನ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವು ಜೂ.25ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.


ಮುಖ್ಯ ಅತಿಥಿಯಾಗಿ, ವಿದ್ಯಾರ್ಥಿಗಳನ್ನು ಅಭಿನಂದಿಸಿದ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಗುಣಾತ್ಮಕ ಶಿಕ್ಷಣ ನೀಡುತ್ತಿರುವ ಶಾಲೆಗಳಲ್ಲಿ ಉಪ್ಪಳಿಗೆ ಶಾಲೆಯು ಒಂದು. ಜಿಲ್ಲೆಯಲ್ಲಿಯೇ ಮಾದರಿ ಸಂಸ್ಥೆಯಾಗಿದೆ. ಶಾಲಾ ದುರಸ್ಥಿಗೆ ರೂ.3ಲಕ್ಷ ಅನುದಾನ ನೀಡುವುದಲ್ಲದೆ ಅಗತ್ಯ ಬೇಡಿಕೆಗಳೊಗೆ ಸದಾ ನಿಮ್ಮೊಂದಿಗಿರುವುದಾಗಿ ತಿಳಿಸಿದರು.
ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಬೆಟ್ಟಂಪಾಡಿ ಗ್ರಾ.ಪಂ ಅಧ್ಯಕ್ಷೆ ವಿದ್ಯಾಶ್ರೀ ಮಾತನಾಡಿ, ಸತತವಾಗಿ ಶೇ.100 ಫಲಿತಾಂಶ ದಾಖಲಾಗುವ ಮೂಲಕ ಶಾಲೆ ಊರಿನ ಹೆಸರನ್ನು ಹತ್ತೂರಲ್ಲಿ ಪಸರಿಸುವಂತೆ ಮಾಡಿದ ಎಂದರು.


ಅಭಿನಂದನೆ:
2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳನ್ನು ಹಿರಿಯ ವಿದ್ಯಾರ್ಥಿ ಸಂಘದಿಂದ ಸ್ಮರಣಿಕೆ ಮತ್ತು ಎಸ್‌ಡಿಎಂಸಿ ಹಾಗೂ ಶಾಲೆಯ ವತಿಯಿಂದ ಶಾಲು ಹೊಂದಿಸಿ ಅಭಿನಂದಿಸಲಾಯಿತು.ಪ್ರತಿ ವಿಷಯವಾರು ಶಿಕ್ಷಕರು ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ವೈಯುಕ್ತಿಕ ಬಹುಮಾನವನ್ನು ನೀಡಿ ಅಭಿನಂದಿಸಿದರು.


ಧ್ವನಿವರ್ಧಕ ಕೊಡುಗೆ:
2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು, ನ್ಯಾಯವಾದಿ ಚಿದಾನಂದ ಬೈಲಾಡಿ ಹಾಗೂ ಮಂಗಳೂರು ನ್ಯೂ ಫರ್ನಿಚರ್ ಮಾಲಕ ಜಬ್ಬಾರ್‌ರವರು ಶಾಲಾ ಸಭಾಂಗಣಕ್ಕೆ ಕೊಡುಗೆಯಾಗಿ ನೀಡಿದ ಸುಮಾರು ರೂ.70 ಸಾವಿರ ಮೌಲ್ಯದ ಧ್ವನಿವರ್ಧಕ ಶಾಲಾ ಮುಖ್ಯ ಶಿಕ್ಷಕರಿಗೆ ಹಸ್ತಾಂತರಿಸಲಾಯಿತು.


ಕೆಪಿಎಸ್ ಶಾಲೆಗೆ ಶಾಸಕರಿಗೆ ಮನವಿ:
ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಒಂದೇ ಸೂರಿನಡಿಯಲ್ಲಿರುವ ಸರಕಾರಿ ಪ್ರೌಢಶಾಲೆಯಲ್ಲಿ ಪದವಿ ಪೂರ್ವ ಶಿಕ್ಷಣ ತರಗತಿಯನ್ನು ಪ್ರಾರಂಭಿಸಬೇಕು. ಮತ್ತು ಈಗಿರುವ ಶಾಲೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತಿಸಬೇಕು ಎಂಬ ಸಾರ್ವಜನಿಕರ ಅಭಿಪ್ರಾಯದಂತೆ ಶಾಲಾಭಿವೃದ್ಧಿ ಸಮಿತಿಯಿಂದ ಶಾಸಕರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಶಾಸಕರು ಈಡೇರಿಸುವ ಭರವಸೆ ನೀಡಿದರು.


ಎಸ್‌ಡಿಎಂಸಿ ಕಾರ್ಯಾಧ್ಯಕ್ಷರು ಕೃಷ್ಣಪ್ರಸಾದ್ ಆಳ್ವ, ಬೆಟ್ಟಂಪಾಡಿ ಗ್ರಾ.ಪಂ ಸದಸ್ಯರಾದ ಪ್ರಕಾಶ್ ರೈ ಬೈಲಾಡಿ, ಉಮಾವತಿ ಎಸ್ ಮಣಿಯಾಣಿ, ಸುಮಲತಾ, ಪಾಣಾಜೆ ಗ್ರಾ.ಪಂ ಸದಸ್ಯೆ ವಿಮಲ, ನಿವೃತ್ತ ಮುಖ್ಯ ಶಿಕ್ಷಕ ನಾರಾಯಣ ಕೆ., ನಾರಾಯಣ ರೈ ಕುಕ್ಕುವಳ್ಳಿ, ದಾಸ್ ಪ್ರಕಾಶ್ ರೈ, ವಿಮಲ, ಸದಾಶಿವ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶ್ಯಾಮಲಾ ಯಂ. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಶಾಂತ್ ಅಜ್ಜಿಕಲ್ಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ಅನ್ನಮ್ಮ ಸ್ವಾಗತಿಸಿದರು.ಶಿಕ್ಷಕಿಯರಾದ ವಿದ್ಯಾಲಕ್ಷ್ಮಿ, ಸವಿತಾ, ಜಯಲತಾ, ಆಶಾ ವಿದ್ಯಾರ್ಥಿಗಳ ಪಟ್ಟಿಯನ್ನು ವಾಚಿಸಿದರು. ಹಿರಿಯ ಶಿಕ್ಷಕ ರಾಮಚಂದ್ರ ಕೆ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಮಕೃಷ್ಣ ಕೆ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳ ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಸಹ ಭೋಜನ ನಡೆಯಿತು.

ಶಾಲಾ ಎಸ್‌ಡಿಎಂಸಿ ಕಾರ್ಯಾಧ್ಯಕ್ಷ ಕೃಷ್ಣಪ್ರಸಾದ್ ಆಳ್ವರವರು ಕಳೆದ ಒಂಬತ್ತು ವರ್ಷಗಳಿಂದ ಶಾಲೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಚಿನ್ನದ ಹಾಗೂ ಬೆಳ್ಳಿಯ ನಾಣ್ಯಗಳನ್ನು ನೀಡಿ ಅಭಿನಂದಿಸಲಾಗುತ್ತಿದ್ದು ಈ ವರ್ಷವೂ ಪ್ರಥಮ ಸ್ಥಾನ ಪಡೆದ ಶ್ರೇಯಾ ಹಾಗೂ ದ್ವಿತೀಯ ಸ್ಥಾನ ಪಡೆದ ವಿಜೇತ್‌ರವರನ್ನು ಅಭಿನಂದಿಸಿದರು.

LEAVE A REPLY

Please enter your comment!
Please enter your name here