ನೆಲ್ಯಾಡಿ: ಮೆಕ್ಯಾನಿಕ್ ಸುರೇಶ್ ನಿಧನ

0

ನೆಲ್ಯಾಡಿ: ಕೊಣಾಲು ಗ್ರಾಮದ ಪಾಂಡಿಬೆಟ್ಟು ನಿವಾಸಿ, ಮೆಕ್ಯಾನಿಕ್ ಸುರೇಶ್(55ವ)ಅವರು ಅಲ್ಪಕಾಲದ ಅನಾರೋಗ್ಯದಿಂದ ಜೂ.28ರಂದು ಮುಂಜಾನೆ ಮಂಗಳೂರು ವೆನ್‌ಲಾಕ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಸುರೇಶ್ ಅವರು ಸುಮಾರು 20ವರ್ಷಗಳಿಂದ ನೆಲ್ಯಾಡಿಯಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡಿಕೊಂಡಿದ್ದರು. ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ. ಮೃತರು ಪತ್ನಿ ಉಷಾ, ಪುತ್ರಿ ಅನುಶ್ರೀ ಹಾಗೂ ಪುತ್ರ ಅಭಿಷೇಕ್ ಅವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here