ನೆಲ್ಯಾಡಿ: ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ

0

ನೆಲ್ಯಾಡಿ: ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ನಡೆಯಿತು.

ಸಮಾರಂಭದಲ್ಲಿ ಮಾತನಾಡಿದ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಿಶಿರ ಅವರು, ಯುವಕರು ವಿವಿಧ ಕಾರಣಗಳಿಂದ ಮಾದಕ ದ್ರವ್ಯದ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಮಾದಕ ದ್ರವ್ಯಗಳ ಪಿಡುಗು ಸಮಾಜದಲ್ಲಿ ಆಳವಾಗಿ ಬೇರೂರಿದೆ. ಮಾದಕ ವ್ಯಸನ ಮತ್ತು ದುರುಪಯೋಗದ ಹಿಡಿತದಿಂದ ಜನರನ್ನು ರಕ್ಷಿಸಲು, ಮಾದಕ ವ್ಯಸನ ಮತ್ತು ಅಕ್ರಮ ಸಾಗಣೆ ವಿರುದ್ಧ ಅರಿವು ಮೂಡಿಸುವ ದೃಷ್ಟಿಯಿಂದ ಪ್ರತಿ ವರ್ಷ ಜೂ.26ರಂದು ಮಾದಕ ದ್ರವ್ಯ ವಿರೋಧಿ ದಿನಾಚರಣೆ ಆಚರಿಸಲಾಗುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಅನ್ನಮ್ಮ ಸ್ವಾಗತಿಸಿದರು. ಅಂಗನವಾಡಿ ಮೇಲ್ವಿಚಾರಕಿ ಪುಷ್ಪಾವತಿ ವಂದಿಸಿದರು.

LEAVE A REPLY

Please enter your comment!
Please enter your name here