ಈಶ್ವರಮಂಗಳ ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲಾ ಪೋಷಕರ ಸಭೆ

0

ಪುತ್ತೂರು: ಈಶ್ವರಮಂಗಳ ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲಾ ಮಕ್ಕಳ ಶಿಕ್ಷಕ-ರಕ್ಷಕ ಸಭೆಯು ಜೂ.29ರಂದು ನಡೆಯಿತು.ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲೆಯ ಸಂಚಾಲಕ ಶಿವರಾಮ ಪಿ ರವರು ನೆರವೇರಿಸಿದರು.

ಶಾಲಾ ಪ್ರಾಂಶುಪಾಲ ಕೆ ಶಾಮಣ್ಣ ಪ್ರಾಸ್ತಾವಿಕ ನುಡಿಗಳಲ್ಲಿ ಶಾಲೆಯ ಶೈಕ್ಷಣಿಕ ವಿಚಾರಗಳ ಬಗ್ಗೆ ಮಾತನಾಡಿದರು. ಮುಖ್ಯ ಅತಿಥಿ ಪರೀಕ್ಷಿತ್ ತೋಳ್ಪಾಡಿಯವರು ಗುರು ಮತ್ತು ಶಿಷ್ಯರ ಸಂಬಂಧದಲ್ಲಿ ಶಿಕ್ಷಣದ ಮೂಲ ಅರ್ಥವನ್ನು ತಿಳಿಸಿದರು.ಸಂಚಾಲಕ ಶಿವರಾಮ ಪಿ ಜೀವನದಲ್ಲಿ ರೂಡಿಸಿಕೊಳ್ಳಬೇಕಾದ ಸಂಸ್ಕಾರ,ಶಿಕ್ಷಣದಲ್ಲಿ ಪೋಷಕರ ಪಾತ್ರವನ್ನು ಸರಳವಾಗಿ ವ್ಯಕ್ತಪಡಿಸಿದರು. ಶಾಲಾಡಳಿತ ಮಂಡಳಿಯ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ಮಾತನಾಡಿ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ನೀಡುವ ಗುರಿಯನ್ನು ಇಟ್ಟುಕೊಂಡಿದ್ದು ವಿದ್ಯಾರ್ಥಿಗಳಲ್ಲಿ ಉತ್ತಮ ನಡೆ-ನುಡಿಯನ್ನು ವೃದ್ಧಿಸುವ ಜವಾಬ್ದಾರಿ ನಮ್ಮದು,ತಮ್ಮ ಸಹಕಾರ ಎಲ್ಲಾ ರೀತಿಯಲ್ಲಿ ಇರಲಿ ಎಂದರು.

ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಸೌಮ್ಯ ಎ ಸ್ವಾಗತಿಸಿ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಲತಾ ಡಿ ಕೆ ವಂದಿಸಿದರು. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಪ್ರಾರ್ಥಿಸಿದರು. ಶಿಕ್ಷಕಿಯರಾದ ಅನುಶ್ರೀ ಮತ್ತು ಶ್ವೇತಾ ಕೆ ಎನ್ ಕಾರ್ಯಕ್ರಮವನ್ನು ನಿರೂಪಿಸಿದರು.ಸಭೆಯಲ್ಲಿ ಆಡಳಿತ ಮಂಡಳಿಯ ಸದಸ್ಯರು, ,ಶಿಕ್ಷಕ-ಶಿಕ್ಷಕೇತರ ವೃಂದ ಹಾಗೂ ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here