ರಾಮಕುಂಜ ಆ.ಮಾ.ಶಾಲಾ ಪೂರ್ವ ಪ್ರಾಥಮಿಕ ಶಾಲೆಯ ಪೋಷಕರ ಸಭೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ಶಾಲೆಯ ಮೊದಲ ಪೊಷಕರ ಸಭೆ ಜೂ.29ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.
ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ಅವರು ಅಧ್ಯಕ್ಷತೆ ವಹಿಸಿ, ಮಕ್ಕಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಪೋಷಕರ ಪಾತ್ರದ ಬಗ್ಗೆ ಮಾತನಾಡಿದರು. ಸಂಸ್ಥೆಯ ಆಡಳಿತಾಧಿಕಾರಿ ಆನಂದ್ ಎಸ್.ಟಿ ಅವರು ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲೋಹಿತಾ ಸ್ವಾಗತಿಸಿದರು. ಸಹಶಿಕ್ಷಕಿ ಸುಜಾ ಪ್ರಾರ್ಥಿಸಿದರು. ಸಹಶಿಕ್ಷಕಿ ಭವ್ಯಾ ಜಿ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕಿ ಕಾವ್ಯ ವಂದಿಸಿದರು. ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here