ಜು.3: ಎಸ್ಎಂಎ ವತಿಯಿಂದ ನೇರಳಕಟ್ಟೆಯಲ್ಲಿ ಮೊಹಲ್ಲಾ ಪ್ರತಿನಿಧಿ ಸಮಾವೇಶ

0

ಪುತ್ತೂರು: ಸುನ್ನಿ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಎಸ್ ಎಂ ಎ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಸಮಿತಿ ವತಿಯಿಂದ ಜು.3ರಂದು ಬೆಳಿಗ್ಗೆ 10 ಗಂಟೆಗೆ ನೆರಳಕಟ್ಟೆ ಜನಪ್ರಿಯ ಗಾರ್ಡನ್ ನಲ್ಲಿ ಸಮಾವೇಶ ಹಾಗೂ ಕರ್ವೆಲ್ ಸಾದಾತ್ ತಂಙಳ್ ಅನುಸ್ಮರಣೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ಎಸ್ ಎಂಎ ರಾಜ್ಯಾಧ್ಯಕ್ಷ ಇಸ್ಮಾಯಿಲ್ ತಂಙಳ್ ಪ್ರಾರ್ಥನೆ ನಡೆಸಲಿದ್ದು ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷರಾದ ಯೂಸುಫ್ ಗೌಸಿಯಾ ಸಾಜ ವಹಿಸಲಿದ್ದಾರೆ.

ಪ್ರಾಸ್ತಾವಿಕವಾಗಿ ರಾಜ್ಯ ಕೋಶಾಧಿಕಾರಿ ಹಾಜಿ ಹಮೀದ್ ಕೊಡುಂಗಾಯಿ ಮಾತನಾಡಲಿದ್ದು ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಹುಸೈನ್ ಸಅದಿ ಕೆಸಿ ರೋಡ್ ನಿರ್ವಹಿಸಲಿದ್ದಾರೆ. ಖ್ಯಾತ ವಾಗ್ಮಿ, ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬು ಸುಫಿಯಾನ್ ಇಬ್ರಾಹಿಂ ಮದನಿ ವಿಷಯ ಮಂಡನೆ ನಡೆಸಲಿದ್ದಾರೆ. ರಾಜ್ಯ ಎಸ್ ಎಂ ಎ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಮಾನ್ ಮದನಿ, ರಾಜ್ಯ ಕಾರ್ಯದರ್ಶಿಗಳಾದ ಸಾದಿಕ್ ಮಾಸ್ಟರ್, ಅಶ್ರಫ್ ಸಖಾಫಿ ಮಾಡಾವು ಹಾಗೂ ರಾಜ್ಯ ಜಿಲ್ಲಾ ಝೋನ್ ನಾಯಕರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸುಮಾರು 240 ಮೊಹಲ್ಲಾಗಳ ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ಎಸ್ ಎಂ ಎ ಜಿಲ್ಲಾ ಸ್ವಾಗತ ಸಮಿತಿ ಅಧ್ಯಕ್ಷರಾದ ಹಾಜಿ ಹಮೀದ್ ಕೊಡಂಗಾಯಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here