ಉಪ್ಪಿನಂಗಡಿ: ಇಲ್ಲಿಗೆ ಸಮೀಪದ 34ನೇ ನೆಕ್ಕಿಲಾಡಿ ಗ್ರಾಮದ ನಿವಾಸಿ ಜಿನಚಂದ್ರ ಎಂಬವರು ಸೊಪ್ಪು ಕಡಿಯುತ್ತಿದ್ದ ಪರಿಶಿಷ್ಠ ಪಂಗಡಕ್ಕೆ ಸೇರಿದ ಯುವತಿಯೋರ್ವಳಿಗೆ ಬೈದು ಹಲ್ಲೆ ನಡೆಸಿದ್ದಾರೆಂದು ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿ ಜಿನಚಂದ್ರರವರೂ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಪ್ರತಿ ದೂರು ನೀಡಿದ್ದು, ಸುಂದರ ನಾಯ್ಕ ಹಾಗೂ ಸುನೀತಾ ಎಂಬವರು ತನ್ನ ಜಮೀನಿಗೆ ಅಕ್ರಮ ಪ್ರವೇಶ ಮಾಡಿದಲ್ಲದೆ, ಆಕ್ಷೇಪಿಸಿದ್ದಕ್ಕೆ ಬೆದರಿಕೆಯೊಡ್ಡಿದ್ದಾರೆಂದು ದೂರಿನಲ್ಲಿ ತಿಳಿಸಿದ್ದಾರೆ.