ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕಡಬ ತಾಲೂಕು ಇದರ ನೆಲ್ಯಾಡಿ ವಲಯದ ವತಿಯಿಂದ ಪರಿಸರ ಜಾಗೃತಿ ಮತ್ತು ಗಿಡ ನಾಟಿ ಕಾರ್ಯಕ್ರಮ ಶಿರಾಡಿ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ನಡೆಯಿತು.
ಅರಣ್ಯ ರಕ್ಷಕ ನಿಂಗಪ್ಪರವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪರಿಸರ ಸಂರಕ್ಷಣೆಯಲ್ಲಿ ಅರಣ್ಯ ಇಲಾಖೆಯೊಂದಿಗೆ ಸಾರ್ವಜನಿಕರು ಕೈಜೋಡಿಸಬೇಕೆಂದು ಹೇಳಿದರು. ನೆಲ್ಯಾಡಿ ವಲಯ ಒಕ್ಕೂಟದ ಅಧ್ಯಕ್ಷ ಕುಶಾಲಪ್ಪರವರು ಮಾತನಾಡಿ, ಪರಿಸರವನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ನೀಡುವ ಕಾರ್ಯವಾಗಬೇಕೆಂದು ಹೇಳಿದರು. ಶಿರಾಡಿ ಒಕ್ಕೂಟದ ಅಧ್ಯಕ್ಷ ಸುಕುಮಾರ್ ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮದಲ್ಲಿ ಅರಣ್ಯ ರಕ್ಷಕ ಚಂದ್ರು, ಅರಣ್ಯ ವೀಕ್ಷಕ ಸತೀಶ್, ಕೃಷಿ ಮೇಲ್ವಿಚಾರಕ ಸೋಮೇಶ್, ಒಕ್ಕೂಟದ ಪದಾಧಿಕಾರಿಗಳು, ಸೇವಾಪ್ರತಿನಿಧಿ ಪ್ರಿಯ, ಸಂಧ್ಯಾ ಉಪಸ್ಥಿತರಿದ್ದರು. ವಲಯದ ಮೇಲ್ವಿಚಾರಕ ವಿಜೇಶ್ ಜೈನ್ರವರು ಪ್ರಸ್ತಾವಿಕವಾಗಿ ಮಾತನಾಡಿದರು, ಒಕ್ಕೂಟದ ಪದಾಧಿಕಾರಿ ಗ್ರೇಸಿ ಚಾಕೋಚನ್ ಸ್ವಾಗತಿಸಿ, ಮಿನಿ ವಂದಿಸಿದರು. ಶಿರಾಡಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಕಾರ್ಯಕ್ರಮ ನಿರ್ವಹಿಸಿದರು.