ವಿವೇಕಾನಂದ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ದಿ.ಎಲ್.ಎನ್ ಕುಡೂರು ಅವರ ಶ್ರದ್ದಾಂಜಲಿ ಸಭೆ

0

ಪುತ್ತೂರು: ವಿದ್ಯಾವರ್ಧಕ ಸಂಘದ ಅಂಗ ಸಂಸ್ಥೆಯಾದ ವಿವೇಕಾನಂದ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ 1998ರಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಎಲ್.ಎನ್. ಕುಡೂರು ಅವರಿಗೆ ಶ್ರದ್ದಾಂಜಲಿ ಸಭೆ ನಡೆಯಿತು.


ಇವರು ವಿಟ್ಲದ ಜೆ.ಸಿ. ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾಗಿದ್ದು,ವಿಠಲ ಶೈಕ್ಷಣಿಕ ಸಂಸ್ಥೆಗಳ ಸಂಚಾಲಕ,ಕ್ಯಾಂಪ್ಕೋ ಮಾಜಿ ಅಧ್ಯಕ್ಷರಾಗಿಯೂ, ಜೆಸಿಐ ಇಂಡಿಯಾದ ನ್ಯಾಷನಲ್ ವೈಸ್ ಪ್ರೆಸಿಡೆಂಟ್ ಆಗಿಯೂ ಸೇವೆ ಸಲ್ಲಿಸಿರುತ್ತಾರೆ. ವಿಟ್ಲದ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರೂ ಆಗಿ ಸೇವೆ ಸಲ್ಲಿಸಿದ್ದರು.ಇವರು ಹಲವಾರು ಸಮಾಜಮುಖಿ ಸೇವೆಗಳಲ್ಲಿ ತೊಡಗಿಸಿಕೊಂಡಿದ್ದರು. ಮೃತರ ಆತ್ಮಕ್ಕೆ ಸದ್ಗತಿ ಸಿಗಲಿ ಎಂದು ಕಾಲೇಜಿನ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗ ಮೌನ ಪ್ರಾರ್ಥನೆ ಸಲ್ಲಿಸಿ ಪ್ರಾರ್ಥಿಸಿದರು.

LEAVE A REPLY

Please enter your comment!
Please enter your name here